BJP: ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಶಿವರಾಜ್ ಸಿಂಗ್ ಚೌಹಾಣ್ ಆಯ್ಕೆ ಬಹುತೇಕ ಫಿಕ್ಸ್ ?

BJP: ಕಳೆದ ಮೂರ್ನಾಲ್ಕು ತಿಂಗಳಿನಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಭಾರೀ ಚರ್ಚೆ ನಡೆಯುತ್ತಲೇ ಇದೆ. ಇದೀಗ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಬಿಜೆಪಿಯ ರಾಷ್ಟ್ರ ಅಧ್ಯಕ್ಷರಾಗುವುದು ಬಹುತೇಕ ಫಿಕ್ಸ್ ಎನ್ನಲಾಗುತ್ತಿದೆ. ಈ ಕುರಿತಾಗಿ ಕೆಲವು ಮಾಧ್ಯಮಗಳು ವರದಿ ಮಾಡಿವೆ. ಅಲ್ಲದೆ ಚೌಹಾಣ್ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ನಡುವೆ ಸುದೀರ್ಘ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ.

ಹೌದು, ಇಬ್ಬರು ನಾಯಕರ ನಡುವಿನ ಭೇಟಿ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿಯ ಆಂತರಿಕ ಮೂಲಗಳ ಪ್ರಕಾರ, ಸೆಪ್ಟಂಬರ್ 28ರೊಳಗೆ ರಾಷ್ಟ್ರಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ನಿರ್ಧರಿಸಲಾಗಿದೆ. ಆ ಮೂಲಕ, ಬಿಹಾರ ಚುನಾವಣೆಗೂ ಮುನ್ನವೇ ಕುತೂಹಲಕ್ಕೆ ತೆರೆ ಎಳೆಯಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ.
ಆರ್‌ಎಸ್‌ಎಸ್ ಮುಖ್ಯಸ್ಥರನ್ನು ಚೌಹಾಣ್, ಭೇಟಿಯಾಗಿರುವುದು ಪಾರ್ಟಿಯಲ್ಲಿ ಸಂಭಾವ್ಯ ಬದಲಾವಣೆಯ ಮುನ್ಸೂಚನೆ ಎಂದು ವ್ಯಾಖ್ಯಾನಿಸಲಾಗುತ್ತಿದೆ. ಆದರೆ, ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ಇದುವರೆಗೆ ಚೌಹಾಣ್, ಬಿಜೆಪಿ ಮತ್ತು ಸಂಘದಿಂದ ವ್ಯಕ್ತವಾಗಿಲ್ಲ.
Comments are closed.