Car: ಹೊಸ ಕಾರು ಕೊಳ್ಳುವ ಆಲೋಚನೆಯಲ್ಲಿದ್ದೀರಾ? ಕಡಿಮೆ ಬೆಲೆ, ಬೆಸ್ಟ್ ಮೈಲೇಜ್ ನೀಡೊ 3 ಕಾರುಗಳಿವು

Share the Article

 

Car: ತಮ್ಮದೇ ಸ್ವಂತ ಕಾರು ಇರಬೇಕು ಎಂಬುದು ಪ್ರತಿಯೊಂದು ಕುಟುಂಬದ ಕನಸು. ಆದರೆ ಕಾರುಕೊಳ್ಳುವಷ್ಟು ಹಣವಿಲ್ಲದಿರುವುದು ಹಾಗೂ ಇಂದಿನ ದುಬಾರಿ ಜಗತ್ತಿನಲ್ಲಿ ಆ ಕನಸು ಕೆಲವರ ಪಾಲಿಗೆ ನನಸಾಗಿ ಉಳಿಯುತ್ತದೆ. ಜೊತೆಗೆ ಎಲ್ಲಾ ಅನುಕೂಲವಿದ್ದರೂ ಕೂಡ ಯಾವ ಕಾರು ಬೆಸ್ಟ್ ಎಂಬುದಾಗಿ ಕೆಲವರು ಗೊಂದಲಕ್ಕೀಡಾಗುತ್ತಾರೆ. ಆದರೀಗ ನಾವು ಪರಿಚಯಿಸಲು ಹೊರಟಿರುವ ಈ ಕಾರುಗಳು ನಿಮ್ಮ ಆದ್ಯತೆಗಳಿಗೆ ತಕ್ಕ ಕಾರುಗಳಾಗಿರಬಹುದು. ಬನ್ನಿ ಹಾಗಾದ್ರೆ ಯಾವೆಲ್ಲಾ ಕಾರುಗಳಿವೆ ಅವುಗಳ ವಿಶೇಷತೆಗಳೇನು ತಿಳಿಯೋಣ.

ಟಾಟಾ ಟಿಯಾಗೊ: ಈ ಕಾರಿನ ಮೂಲ ಮಾದರಿಯ ಬೆಲೆ ರೂ. 5.00 ಲಕ್ಷದಿಂದ ಆರಂಭವಾಗಿ ಟಾಪ್ ಮಾದರಿಯ ಬೆಲೆ ರೂ. 8.55 ಲಕ್ಷದವರೆಗೆ (ಎಕ್ಸ್ ಶೋರೂಂ) ಇದೆ. ಎಲೆಕ್ಟ್ರಿಕ್ ಆಗಿ ಅಡ್ಜಸ್ಟ್ ಮಾಡಬಹುದಾದ ಒಆರ್‌ವಿಎಂಗಳು, ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ಪ್ಲೇ ಹೊಂದಾಣಿಕೆಯೊಂದಿಗೆ 7 ಇಂಚಿನ ಟಚ್ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಮತ್ತು ಹಿಂಭಾಗದ ಕ್ಯಾಮೆರಾವನ್ನು ನೀಡಲಾಗಿದೆ. ಟಾಟಾ ಟಿಯಾಗೊದಲ್ಲಿ ಡ್ಯುಯಲ್ ಫ್ರಂಟ್ ಏರ್ ಬ್ಯಾಗ್‌ಗಳು, ರಿಯರ್ ಪಾರ್ಕಿಂಗ್ ಸೆನ್ಸಾರ್, ಎಬಿಎಸ್ ವಿತ್ ಇಬಿಡಿ ಮತ್ತು ಕಾರ್ನರಿಂಗ್ ಸ್ಟೆಬಿಲಿಟಿ ಕಂಟ್ರೋಲ್ ನೀಡಲಾಗಿದೆ. ಟಾಟಾ ಟಿಯಾಗೊ 1.2-ಲೀಟರ್ ಪೆಟ್ರೋಲ್ ಎಂಜಿನ್ ನೊಂದಿಗೆ ಬರುತ್ತದೆ, ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಎಎಂಟಿಯೊಂದಿಗೆ ಖರೀದಿಸಬಹುದು. ಹಾಗೆಯೇ ಸಿಎನ್‌ಜಿ ಆಯ್ಕೆಯಲ್ಲೂ ಲಭ್ಯವಿದೆ.

ನಿಸ್ಸಾನ್ ಮ್ಯಾಗ್ನೈಟ್: ಈ ಕಾರು ರೂ.6.14 ಲಕ್ಷದಿಂದ ರೂ.11.76 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ನೀಡುತ್ತದೆ. 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ ಮತ್ತು ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 17 ರಿಂದ 20 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7 – ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್ ಹಾಗೂ ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಫ್ರಂಟ್ & ರೇರ್ ಪಾರ್ಕಿಂಗ್ ಸೆನ್ಸರ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ಹೊಸ ನಿಸ್ಸಾನ್ ಮ್ಯಾಗ್ನೈಟ್ ಕುರೊ ಎಡಿಷನ್ ರೂ.8.30 ಲಕ್ಷ (ಎಕ್ಸ್-ಶೋರೂಂ) ಬೆಲೆಗೆ ಮಾರಾಟಕ್ಕೆ ಬಂದಿದೆ. ‘ಎನ್-ಕನೆಕ್ಟಾ’ ರೂಪಾಂತರವನ್ನು (ವೇರಿಯೆಂಟ್) ಆಧರಿಸಿದೆ. ಬುಕ್ಕಿಂಗ್ ಕೂಡ ಶುರುವಾಗಿದ್ದು, ಆಸಕ್ತ ಗ್ರಾಹಕರು ಸಮೀಪದ ಕಂಪನಿಯ ಡೀಲರ್‌ಶಿಪ್‌ ಅಥವಾ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ರೂ.11,000 ಮುಂಗಡ ಹಣವನ್ನು ಪಾವತಿಸುವುದರೊಂದಿಗೆ ಆರ್ಡರ್ ಮಾಡಬಹುದು

ಮಾರುತಿ ಸುಜುಕಿ ಇಗ್ನಿಸ್: ಈ ಹ್ಯಾಚ್‌ಬ್ಯಾಕ್‌ ಬಜೆಟ್ ಬೆಲೆಯಲ್ಲಿ ಲಭ್ಯವಿದ್ದು, ಆರಂಭಿಕ ಬೆಲೆ ರೂ.5.85 ಲಕ್ಷ ಹಾಗೂ ಟಾಪ್ ವೇರಿಯೆಂಟ್ ಬೆಲೆ ರೂ.8.12 ಲಕ್ಷ (ಎಕ್ಸ್-ಶೋರೂಂ) ಇದೆ. ಹೊಸ ಇಗ್ನಿಸ್ 7-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸ್ಟಾರ್ಟ್/ಸ್ಟಾಪ್ ಬಟನ್ ಹಾಗೂ ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಹಾಗೂ ರೇರ್ ಪಾರ್ಕಿಂಗ್ ಸೇನಾರ್ಸ್ ನೀಡಲಾಗಿದೆ. 1.2-ಲೀಟರ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 5-ಸ್ಪೀಡ್ ಮ್ಯಾನುವಲ್/ಆಟೋಮೆಟಿಕ್ ಗೇರ್‌ಬಾಕ್ಸ್‌ ಆಯ್ಕೆಗಳನ್ನು ನೀಡುತ್ತದೆ. 20 ಕಿ.ಮೀವರೆಗೂ ಮೈಲೇಜ್ ನೀಡುತ್ತದೆ. 32 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್ ಹೊಂದಿದೆ.

Comments are closed.