Hassan: ಹಾಸನಾಂಬೆ ದರ್ಶನಕ್ಕಿದ್ದ ವಿಶೇಷ ಪಾಸ್ ರದ್ದು- ಹೊಸ ನಿಯಮ ಜಾರಿಗೆ ಜಿಲ್ಲಾಡಳಿತ ನಿರ್ಧಾರ !!

Share the Article

Hassan: ವರ್ಷಕ್ಕೊಮ್ಮೆ ದರ್ಶನ ನೀಡುವ, ನಾಡಿನ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಹಾಸನಾಂಬೆ ದರ್ಶನಕ್ಕೆ ಬರುವ ಭಕ್ತರಿಗೆ ಜಿಲ್ಲಾಡಳಿತವು ವಿಶೇಷ ಪಾಸ್ ವ್ಯವಸ್ಥೆಯನ್ನು ಮಾಡಿ ದರ್ಶನ ವ್ಯವಸ್ಥೆಗೆ ಅವಕಾಶ ಮಾಡಿಕೊಡುತ್ತಿತ್ತು. ಆದರೆ ಇದೀಗ ಈ ವಿಶೇಷ ಪಾಸ್ ವ್ಯವಸ್ಥೆ ರದ್ದುಗೊಳಿಸಿ ಬದಲಿ ವ್ಯವಸ್ಥೆಯನ್ನು ತರಲು ಜಿಲ್ಲಾಡಳಿತ ನಿರ್ಧರಿಸಿದೆ.

ಹೌದು, ಹಾಸನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಹಾಸನಾಂಬೆ ಜಾತ್ರಾಮಹೋತ್ಸವದ ಪೂರ್ವ ಸಿದ್ದತೆ ಸಭೆಯಲ್ಲಿ ಎಸಿ ಮಾರುತಿ ಹೇಳಿಕೆ ನೀಡಿದ್ದು, ಹಾಸನಾಂಬೆ ದರ್ಶನಕ್ಕೆ ಬರುವ ಭಕ್ತರಿಗೆ ನೀಡುತ್ತಿದ್ದ ಪಾಸ್ ವ್ಯವಸ್ಥೆ ರದ್ದುಗೊಳಿಸಿ ‘ಗೋಲ್ಡ್ ಕಾರ್ಡ್’ ವಿತರಿಸಲು ನಿರ್ಧರಿಸಿದ್ದೇವೆ. ಗೋಲ್ಡ್ ಕಾರ್ಡ್ ಮೂಲಕ ಒಬ್ಬರು ಮಾತ್ರ ಹಾಸನಾಂಬೆ ದರ್ಶನ ಪಡೆಯಬಹುದಾಗಿದೆ.ಒಂದು ಕಾರ್ಡ್ ಮೂಲಕ ಒಬ್ಬರಿಗೆ ಮಾತ್ರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.

ಅಲ್ಲದೆ ಉಚಿತ ಪಾಸ್ ಪಡೆದು ದರ್ಶನಕ್ಕೆ ಬರುತ್ತಿದ್ದ ಜನರಿಂದ ಗೊಂದಲವಾಗುತ್ತಿತ್ತು. ಆದ್ದರಿಂದ ಉಚಿತ ಪಾಸ್ ಬದಲು ಕೇವಲ ಗೋಲ್ಡ್ ಕಾರ್ಡ್ ಬಳಕೆ ಮಾಡಲಾಗುವುದು. ಸಿಎಂ, ಡಿಸಿಎಂ, ಸಿಜೆ ಹೊರತುಪಡಿಸಿ ಉಳಿದ ಎಲ್ಲಾ ಗಣ್ಯರಿಗೆ ವೈಯಕ್ತಿಕ ಶಿಷ್ಟಾಚಾರ ಬದಲು ಜಿಲ್ಲಾಡಳಿತ ನಿಯೋಜಿತ ವಾಹನ ಬಳಕೆ ಮಾಡಲಾಗುವುದು. ಕೊನೆಯ 5 ದಿನ ಎಲ್ಲಾ ರೀತಿಯ ಶಿಷ್ಟಾಚಾರ ರದ್ದು ಎಂದು ಹಾಸನಾಂಬೆ ದೇವಾಲಯದ ಆಡಳಿತ ಮಂಡಳಿ ಅಧಿಕಾರಿ ಮಾರುತಿ ಮಾಹಿತಿ ನೀಡಿದರು.

ಇನ್ನು ಹಾಸನಾಂಬೆ ಉತ್ಸವಕ್ಕೆ ಇದೀಗ ದಿನಗಣನೆ ಶುರುವಾಗಿದೆ. ಈ ವರ್ಷ ಅಕ್ಟೋಬರ್ 9ರಿಂದ 23ರವರೆಗೆ ಹಾಸನಾಂಬೆ ಉತ್ಸವ ಜರುಗಲಿದೆ. ಮೊದಲ ಹಾಗೂ ಕೊನೆಯ ದಿನ ಹೊರತುಪಡಿಸಿ ಉಳಿದ 13 ದಿನ ಭಕ್ತರಿಗೆ ಹಾಸನಾಂಬೆ ದರುಶನ ಕರುಣಿಸಲಿದ್ದಾಳೆ.

Comments are closed.