Dakshina Kannada : ಭಾರೀ ಮಳೆ ಹಿನ್ನಲೆ ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ ಘೋಷಣೆ – ನಾಳೆ ಶಾಲಾ, ಕಾಲೇಜು, ಅಂಗನವಾಡಿಗಳಿಗೆ ರಜೆ

Share the Article

Dakshina Kannada : ರಾಜ್ಯದ ಹಲವು ಭಾಗಗಳಲ್ಲಿ ಸಿಕ್ಕಾಪಟ್ಟೆ ಮಳೆ ಆಗುತ್ತಿದ್ದು ಹವಮಾನ ಇಲಾಖೆಯು ಎಚ್ಚರಿಕೆಯನ್ನು ನೀಡುತ್ತಲೇ ಇದೆ. ಅಂತೆಯೇ ಕರಾವಳಿ ಭಾಗದಲ್ಲಿಯೂ ಮಳೆಯ ಅಬ್ಬರ ಹೆಚ್ಚಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಹೌದು, ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ, ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಆಗಸ್ಟ್ 29, ಶುಕ್ರವಾರ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದೆ.

ಜಿಲ್ಲಾಧಿಕಾರಿಯವರ ಪ್ರಕಟಣೆ:

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ರೆಡ್ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.

1. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 29-08-2025 ರಂದು ರಜೆಯನ್ನು ಘೋಷಿಸಲಾಗಿರುತ್ತದೆ.

2. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.

3. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.

4. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.

5. ಪ್ರವಾಸಿಗರು/ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.

6. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ದ ಸ್ಥಿತಿಯಲ್ಲಿರಿಸಿಕೊಳ್ಳುವುದು.

Comments are closed.