KEA: ಸೆ.1 ರಿಂದ K-SET ಪರೀಕ್ಷೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ

Share the Article

KSET Exam: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೆ.1 ರಿಂದ ಕೆ-ಸೆಟ್‌ ಅರ್ಜಿ ಸಲ್ಲಿಕೆ ಪ್ರಕ್ರಿಯೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಕೆಲವು ತಾಂತ್ರಿಕ ಕಾರಣಗಳಿಂದ ಇಂದು ಕೂಡ ಆರಂಭಿಸಲು ಸಾಧ್ಯವಾಗಿಲ್ಲ. ಸೆ.1ರಂದು ಅರ್ಜಿ ಸಲ್ಲಿಸಲು ಲಿಂಕ್ ಬಿಡುಗಡೆ ಮಾಡಲಾಗುವುದು ಎಂದು ಕಾರ್ಯನಿರ್ವಾಹಕ ನಿರ್ದೇಶಕರು ಎಚ್‌ ಪ್ರಸನ್ನ ಅವರು ಪ್ರಕಟ ಮಾಡಿದ್ದಾರೆ.

 

Comments are closed.