Favorite CM: ಯಾವ ರಾಜ್ಯದ ಮುಖ್ಯಮಂತ್ರಿಯನ್ನು ಜನರು ಹೆಚ್ಚು ನಂಬುತ್ತಾರೆ? ಟಾಪ್ 10ರಲ್ಲಿ ಇರುವ ಮುಖ್ಯಮಂತ್ರಿಗಳು ಯಾರು?

Favorite CM: ಭಾರತದ ರಾಜ್ಯಗಳ ಮುಖ್ಯಮಂತ್ರಿಗಳಲ್ಲಿ ಯಾವ ಮುಖ್ಯ ಮಂತ್ರಿ ಮೇಲೆ ಜನ ಹೆಚ್ಚು ನಂಬಿಕೆ ಇಟ್ಟಿದ್ದಾರೆ ಎಂದು ಸಮೀಕ್ಷೆ ಮಾಡಿದ್ರೆ ಯಾವ ಸಿಎಂ ನೆಚ್ಚಿನ ಮುಖ್ಯಮಂತ್ರಿಯಾಗಿ ಹೊರಹೊಮ್ಮಬಹುದು. ಸಿ-ವೋಟರ್ ನಡೆಸಿದ ಇತ್ತೀಚಿನ ಸಮೀಕ್ಷೆಯಲ್ಲಿ ಈ ಮಾಹಿತಿ ಬಹಿರಂಗಗೊಂಡಿದೆ.

ಯುಪಿ ಸಿಎಂ ಯೋಗಿ ಆದಿತ್ಯನಾಥ್ ದೇಶದ ಅತ್ಯಂತ ಜನಪ್ರಿಯ ಮುಖ್ಯಮಂತ್ರಿಯಾಗಿದ್ದರೆ. 36% ಜನರು ಅವರನ್ನು ದೇಶದ ಅತ್ಯುತ್ತಮ ಮುಖ್ಯಮಂತ್ರಿ ಎಂದು ಆಯ್ಕೆ ಮಾಡಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎರಡನೇ ಸ್ಥಾನದಲ್ಲಿದ್ದಾರೆ. ಶೇ. 13 ರಷ್ಟು ಜನರು ಅವರನ್ನು ಜನಪ್ರಿಯ ಮುಖ್ಯಮಂತ್ರಿ ಎಂದು ಪರಿಗಣಿಸಿದ್ದಾರೆ.
ಇದರ ನಂತರ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರನ್ನು ಶೇ. 7 ರಷ್ಟು ಜನರು ಆಯ್ಕೆ ಮಾಡಿದ್ದಾರೆ. ಅವರ ಆಡಳಿತ ಮತ್ತು ಅಭಿವೃದ್ಧಿ ಕಾರ್ಯಗಳು ಈ ಪಟ್ಟಿಯಲ್ಲಿ ಅವರಿಗೆ ಮೂರನೇ ಸ್ಥಾನವನ್ನು ತಂದುಕೊಟ್ಟಿವೆ. ನಾಲ್ಕನೇ ಸ್ಥಾನದಲ್ಲಿರುವ ಬಿಹಾರ ಸಿಎಂ ನಿತೀಶ್ ಕುಮಾರ್ ಅವರನ್ನು ಶೇ. 4.3 ರಷ್ಟು ಜನರು ಮೆಚ್ಚಿದ್ದಾರೆ.
ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರನ್ನು ಶೇ. 3.8 ರಷ್ಟು ಜನರು ಜನಪ್ರಿಯ ಮುಖ್ಯಮಂತ್ರಿ ಎಂದು ಪರಿಗಣಿಸಿದ್ದಾರೆ., ಕೇರಳ ಸಿಎಂ ಪಿಣರಾಯಿ ವಿಜಯನ್ ಅವರನ್ನು ಶೇ. 3 ರಷ್ಟು ಜನರು ಜನಪ್ರಿಯ ನಾಯಕ ಎಂದು ಪರಿಗಣಿಸಿದ್ದಾರೆ. ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರನ್ನು ಶೇ. 2.8 ರಷ್ಟು ಜನರು ಜನಪ್ರಿಯ ನಾಯಕ ಎಂದು ಪರಿಗಣಿಸಿದ್ದಾರೆ.
ನಂತರದ ಸ್ಥಾನದಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರನ್ನು ಶೇ.2.7 ರಷ್ಟು ಜನರು ಹೊಗಳಿದ್ದಾರೆ. ಎಂಟನೇ ಸ್ಥಾನದಲ್ಲಿರುವ ಮೋಹನ್ ಯಾದವ್ ಅವರ ಅಭಿವೃದ್ಧಿ ಕಾರ್ಯಗಳಿಂದಾಗಿ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಒಂಬತ್ತನೇ ಸ್ಥಾನದಲ್ಲಿದ್ದು, ಅತ್ಯಂತ ಜನಪ್ರಿಯ ಮುಖ್ಯಮಂತ್ರಿಯಾಗಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ದೇಶದಲ್ಲಿ ಹತ್ತನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
Mobile Data: ಮೊಬೈಲ್ ಡೇಟಾ ಬೇಗ ಖಾಲಿಯಾಗುತ್ತಾ? ಜಸ್ಟ್ ಹೀಗೆ ಮಾಡಿ, ಇಡೀ ದಿನ ಇಂಟರ್ನೆಟ್ ಬಳಸಿ
Comments are closed.