Journalists Association: ಸುಳ್ಯ ತಾ. ಕಾರ್ಯನಿರತ ಪತ್ರಕರ್ತರ ಸಂಘ ಪದಾಧಿಕಾರಿಗಳ ಆಯ್ಕೆ – ಅಧ್ಯಕ್ಷರಾಗಿ ಪುಷ್ಪರಾಜ ಶೆಟ್ಟಿ ಆಯ್ಕೆ

Share the Article

Journalists’ Association: ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಸೋಮವಾರ ನಡೆದ ಮಹಾಸಭೆಯಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಹಾಲಿ ಅಧ್ಯಕ್ಷರಾಗಿದ್ದ ಲೋಕೇಶ್ ಪೆರ್ಲಂಪಾಡಿ ಅಧ್ಯಕ್ಷತೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಪುಷ್ಪರಾಜ ಶೆಟ್ಟಿ ಆಯ್ಕೆಯಾದರೆ, ಉಪಾಧ್ಯಕ್ಷರಾಗಿ ಪೂಜಾಶ್ರೀ ವಿತೇಶ್ ಕೋಡಿ ಆಯ್ಕೆಯಾದರು.

ಪ್ರಧಾನ ಕಾರ್ಯದರ್ಶಿಯಾಗಿ ಪದ್ಮನಾಭ ಮುಂಡೋಕಜೆ, ಜೊತೆ ಕಾರ್ಯದರ್ಶಿಯಾಗಿ ಜೆ .ಕೆ. ರೈ, ಕೋಶಾಧಿಕಾರಿಯಾಗಿ ಮಿಥುನ್ ಕರ್ಲಪ್ಪಾಡಿ ಆಯ್ಕೆ ಮಾಡಲಾಯ್ತು. ನಿರ್ದೇಶಕರಾಗಿ ಕೃಷ್ಣ ಬೆಟ್ಟ , ಶರೀಫ್ ಜಟ್ಟಿಪಳ್ಳ, ತೇಜೆಶ್ವರ ಕುಂದಲ್ಪಾಡಿ, ಗಿರೀಶ್ ಅಡ್ಪಂಗಾಯ, ಶಿವಪ್ರಸಾದ್ ಕೇರ್ಪಳ, ದಯಾನಂದ ಕಲ್ನಾರ್ ಆಯ್ಕೆಯಾದರು.

ಗೌರವಾಧ್ಯಕ್ಷರಾಗಿ ಲೋಕೇಶ್ ಪೆರ್ಲಂಪಾಡಿ, ಗೌರವ ಸಲಹೆಗಾರರಾಗಿ ಜಯಪ್ರಕಾಶ್ ಕುಕ್ಕೆಟ್ಟಿ, ಗಂಗಾಧರ ಕಲ್ಲಪಳ್ಳಿ, ಗಿರೀಶ್ ಪೆರುಮುಂಡ, ಗಂಗಾಧರ ಮಟ್ಟಿ, ದುರ್ಗಾಕುಮಾರ್ ನಾಯರ್‌ಕೆರೆ, ದಯಾನಂದ ಕೊರತ್ತೋಡಿ ಆಯ್ಕೆಯಾದರು. ಮಹಾಸಭೆಯಲ್ಲಿ ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ ವರದಿ ವಾಚಿಸಿದರು. ಕೋಶಾಧಿಕಾರಿ ಪುಷ್ಪರಾಜ ಶೆಟ್ಟಿ ಲೆಕ್ಕ‌ ಮಂಡಿಸಿದರು. ಜಿಲ್ಲಾ ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ,ಗೌರವಾಧ್ಯಕ್ಷ ದಯಾನಂದ ಕಲ್ನಾರ್ ಉಪಸ್ಥಿತರಿದ್ದರು.

Bengaluru : ಇತಿಹಾಸ ಪುಟ ಸೇರಿದ BBMP- ಇಂದಿನಿಂದ ‘ಗ್ರೇಟರ್ ಬೆಂಗಳೂರು’ ಆಡಳಿತ ಜಾರಿ !!

Comments are closed.