Water Bell: ಮಕ್ಕಳಿಗೆ ನೀರು ಕುಡಿಯೋಕೆ ರಾಜ್ಯದ ಶಾಲೆಗಳಲ್ಲಿ ‘ವಾಟರ್ ಬೆಲ್’?

Water Bell: ಶಾಲಾ ಅವಧಿಯಲ್ಲಿ ಮಕ್ಕಳಿಗೆ ನೀರು ಕುಡಿಯೋಕೆ ಉತ್ತೇಜಿಸಲು ರಾಜ್ಯದ ಶಾಲೆಗಳಲ್ಲಿ ‘ವಾಟರ್ ಬೆಲ್’ (Water Bell) ಕಾರ್ಯಕ್ರಮ ಜಾರಿಗೆ ಶಿಕ್ಷಣ ಇಲಾಖೆ ಮುಂದಾಗಿದೆ.

ಕೇರಳ ಶಾಲೆಗಳಲ್ಲಿ ಈಗಾಗಲೇ ವಾಟರ್ ಬೆಲ್ ಕಾರ್ಯಕ್ರಮ ಅನುಷ್ಠಾನದಲ್ಲಿದ್ದು, ದಿನಕ್ಕೆ ಎರಡು ಬಾರಿ ಕೇರಳದಲ್ಲಿ ವಾಟಲ್ ಬೆಲ್ ಆಗಲಿದೆ. ಬೆಳಗ್ಗೆ 10:30 ಮತ್ತು ಮಧ್ಯಾಹ್ನ 2:30 ರ ಅವಧಿಯಲ್ಲಿ ವಾಟರ್ ಬೆಲ್ ಆಗುತ್ತದೆ. ಈ ಅವಧಿಯಲ್ಲಿ ಮಕ್ಕಳು ನೀರು ಕುಡಿಯುವುದು ಈ ಕಾರ್ಯಕ್ರಮದ ಉದ್ದೇಶ.
ಕೇರಳದಲ್ಲಿ ಶುರು ಆಗಿರುವ ವಾಟರ್ ಬೆಲ್ ಕಾರ್ಯಕ್ರಮ ಕರ್ನಾಟಕದ ಶಾಲೆಗಳಲ್ಲೂ ಅನುಷ್ಠಾನಕ್ಕೆ ಚಿಂತನೆ ನಡೆದಿದೆ. ಈಗಾಗಲೇ ಶಿಕ್ಷಣ ಇಲಾಖೆ ಹಂತದಲ್ಲಿ ವಾಟರ್ ಬೆಲ್ ಜಾರಿ ಬಗ್ಗೆ ಚರ್ಚೆಗಳು ಇವೆ ಎನ್ನಲಾಗುತ್ತಿದೆ. ಶೀಘ್ರವೇ ರಾಜ್ಯದ ಶಾಲೆಗಳಲ್ಲೂ ಈ ಕಾರ್ಯಕ್ರಮ ಅನುಷ್ಠಾನ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಇದನ್ನೂ ಓದಿ:Putin: ಕಾರೊಳಗೆ ಮೋದಿ ಜೊತೆ ಏನು ಸಂಭಾಷಣೆ ನಡೆಯಿತು? ಕೊನೆಗೂ ರಿವಿಲ್ ಮಾಡಿದ ರಷ್ಯಾ ಅಧ್ಯಕ್ಷ ಪುಟಿನ್
Comments are closed.