Home News Nude Gang: ನಡುಕ ಹುಟ್ಟಿಸಿದ ʻನಗ್ನ ಗ್ಯಾಂಗ್‌ʼ! : ʻಬೆತ್ತಲೆಯಾಗಿ ಬರ್ತಾರೆ, ಮಹಿಳೆಯರನ್ನ ಹೊತ್ತೊಯ್ತಾರೆʼ

Nude Gang: ನಡುಕ ಹುಟ್ಟಿಸಿದ ʻನಗ್ನ ಗ್ಯಾಂಗ್‌ʼ! : ʻಬೆತ್ತಲೆಯಾಗಿ ಬರ್ತಾರೆ, ಮಹಿಳೆಯರನ್ನ ಹೊತ್ತೊಯ್ತಾರೆʼ

Hindu neighbor gifts plot of land

Hindu neighbour gifts land to Muslim journalist

Nude Gang: ಭಯಾನಕವಾದ ಗ್ಯಾಂಗ್‌ವೊಂದು ಉತ್ತರ ಪ್ರದೇಶದ ಮೀರತ್‌ನಲ್ಲಿ (UP’s Meerut) ಹುಟ್ಟಿಕೊಂಡಿದೆ. ಇದಕ್ಕೆ ʻನಗ್ನ ಗ್ಯಾಂಗ್‌ ಅಥವಾ ಬೆತ್ತಲೆ ಗ್ಯಾಂಗ್‌ʼ (Nude Gang) ಅಂತ ಕರೆಯಲಾಗ್ತಿದೆ. ಬೆತ್ತಲೆಯಾಗಿ ಬರುವ ಈ ಗ್ಯಾಂಗ್‌ ಸದಸ್ಯರು ಮಹಿಳೆಯರನ್ನ ಹೊತ್ತೊಯ್ಯುತ್ತಿದ್ದಾರೆ.

ಮೀರತ್‌ನಲ್ಲಿ ಇತ್ತೀಚೆಗೆ ಇಂತಹ ನಾಲ್ಕು ಪ್ರಕರಣ ವರದಿಯಾಗಿದ್ದು, ದೌರಾಲಾ ಗ್ರಾಮದ ಮಹಿಳೆಯರಲ್ಲಿ ನಡುಕ ಹುಟ್ಟಿಸಿದೆ. ವಿಷಯದ ಗಂಭೀರತೆ ಪರಿಗಣಿಸಿರುವ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಗ್ಯಾಂಗ್‌ ಪತ್ತೆಹಚ್ಚಲು ಡ್ರೋನ್‌, ಸಿಸಿಟಿವಿಗಳನ್ನು (Drone And CCTV) ಕಣ್ಗಾವಲಿಗೆ ಇರಿಸಲಾಗಿದೆ.

ಈ ಕುರಿತು ದೌರಾಲಾ ಗ್ರಾಮದ ಮುಖ್ಯಸ್ಥ ರಾಜೇಂದ್ರ ಕುಮಾರ್ ಮಾತನಾಡಿ, ಕಳೆದ ಕೆಲ ದಿನಗಳಲ್ಲಿ ಮಹಿಳೆಯರನ್ನು ಹೊತ್ತೊಯ್ದ ನಾಲ್ಕು ಘಟನೆಗಳು ವರದಿಯಾಗಿವೆ. ಇದಕ್ಕೂ ಹಿಂದಿನ ಕೆಲ ಘಟನೆಗಳು ಜನರ ಭಯದಿಂದ ಬೆಳಕಿಗೆ ಬಂದಿಲ್ಲ. ಈ ಗ್ಯಾಂಗ್‌ ಮಹಿಳೆಯರನ್ನೇ ಟಾರ್ಗೆಟ್‌ ಮಾಡಿ ಹೊತ್ತೊಯ್ಯುತ್ತಿದ್ದಾರೆ. ಪೊಲೀಸರು ಕೂಡಲೇ ಗ್ಯಾಂಗ್‌ಅನ್ನು ಪತ್ತೆಹಚ್ಚಬೇಕೆಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ:Blood Moon Eclipse: ರಕ್ತ ಚಂದ್ರ ಗ್ರಹಣ ಪ್ರಯುಕ್ತ ನಾಳೆ ಶೃಂಗೇರಿ ಶಾರದೆ, ಹೊರನಾಡು ಅನ್ನಪೂರ್ಣೆಗೆ ನಿರಂತರ ಜಲಾಭಿಷೇಕ

ಇನ್ನೂ ಈ ಪ್ರದೇಶದಲ್ಲಿ ಮಹಿಳಾ ಪೊಲೀಸರನ್ನ ಭದ್ರತೆಗೆ ನಿಯೋಜಿಸಲಾಗಿದ್ದು, ಶಂಕಿತರಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ ಎಂದು ಸ್ಥಳ ಪರಿಶೀಲನೆ ನಡೆಸಿದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ವಿಪಿನ್ ಟಾಡಾ ತಿಳಿಸಿದ್ದಾರೆ.