Uday Jain: ಸೌಜನ್ಯ ಪ್ರಕರಣ – ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆದ ಉದಯ್‌ ಜೈನ್‌ !!

Share the Article

Uday Jain: ಸುಮಾರು 13 ವರ್ಷಗಳ ಹಿಂದೆ ಧರ್ಮಸ್ಥಳದ ನೇತ್ರಾವತಿ ನದಿ ತೀರದಲ್ಲಿ ಭೀಕರ ಅತ್ಯಾಚಾರಕ್ಕೊಳಗಾಗಿ ಕೊಲೆಗೀಡಾದ ಸೌಜನ್ಯ ಪ್ರಕರಣದಲ್ಲಿ (Soujanya Rape and Murder case) ವಿಚಾರಣೆ ಎದುರಿಸಿದ್ದ ಉದಯ್ ಕುಮಾರ್ ಜೈನ್ (Uday Kumar Jain) ಇದೀಗ ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ.

ಹೌದು, ಸಿಐಡಿ, ಸಿಬಿಐ ತನಿಖೆಯಲ್ಲಿ ಕಳಂಕಮುಕ್ತರಾಗಿದ್ದ ಉದಯ್ ಕುಮಾರ್ ಜೈನ್‌ ಅವರಿಗೆ ಧರ್ಮಸ್ಥಳ ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ನೋಟಿಸ್ ನೀಡಿ ವಿಚಾರಣೆ ನಡೆಸಿತ್ತು. ನೋಟಿಸ್‌ ಹಿನ್ನೆಲೆಯಲ್ಲಿ ಉದಯ್‌ ಜೈನ್‌ ಎಸ್‌ಐಟಿ ವಿಚಾರಣೆಗೆ ಹಾಜರಾಗಿದ್ದರು. ಈ ಬೆನ್ನಲ್ಲೇ ಅವರು ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:Charmadi Ghat: ಚಾರ್ಮಾಡಿ ಘಾಟ್ – ‘KSRTC’ ಬಸ್, ಲಾರಿಗಳ ನಡುವೆ ಭೀಕರ ಅಪಘಾತ !!

ಸೌಜನ್ಯ ಪ್ರಕರಣದಲ್ಲಿ ನನ್ನ ಹೆಸರನ್ನ ಉದ್ದೇಶಪೂರ್ವಕವಾಗಿ ಸೇರಿಸಲಾಗಿದೆ. 13 ವರ್ಷಗಳಿಂದ ನನ್ನ ಹೆಸರನ್ನು ಪ್ರಕರಣದಲ್ಲಿ ಸುಖಾಸುಮ್ಮನೆ ಸೇರಿಸಿದ್ದು ಸಮಾಜದಲ್ಲಿ ನನ್ನನ್ನು ಅನುಮಾನದಿಂದ ನೋಡುವಂತಾಗಿದೆ. ಸಂತೋಷ್ ರಾವ್ ಆರೋಪಿ ಎಂದು ಬೆಳ್ತಂಗಡಿ ಪೊಲೀಸರು ನ್ಯಾಯಾಲಯದಲ್ಲಿ ಚಾರ್ಜ್‌ಶೀಟ್‌ ಸಲ್ಲಿಸಿದರು. ಸಿಐಡಿ, ಸಿಬಿಐ ತನಿಖೆಯಲ್ಲಿ ನನ್ನ ವಿರುದ್ಧ ಎಫ್‌ಐಆರ್ ದಾಖಲಾಗಿಲ್ಲ. ನಾನು ನಿರ್ದೋಷಿ ಎಂದು ಸಾಬೀತುಪಡಿಸಲು ಮಂಪರು ಪರೀಕ್ಷೆ ಕೂಡ ಮಾಡಿಸಿದ್ದೇನೆ. ಹೀಗಾಗಿ ನನಗೆ ನ್ಯಾಯ ಕೊಡಬೇಕು ಅಥವಾ ದಯಾಮರಣ ನೀಡಬೇಕೆಂದು ಉದಯ್ ಜೈನ್ ಮನವಿ ಮಾಡಿಕೊಂಡಿದ್ದಾರೆ.

Comments are closed.