Government Job: ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ – ನೇಮಕಗಳಿಗೆ ಮರುಚಾಲನೆ ನೀಡಿ, ವಯೋಮಿತಿಯೂ ಸಡಿಲಿಸಿದ ಸರ್ಕಾರ

Government Job: ರಾಜ್ಯದಲ್ಲಿ ಸರ್ಕಾರಿ ನೌಕಾರಿ ಆಕಾಂಕ್ಷಿಗಳಿಗೆ ಇದೀಗ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ತಡೆಹಿಡಿಯಲಾಗಿದ್ದ ನೇಮಕಾತಿ ಪ್ರಕ್ರಿಯೆಗಳಿಗೆ ಮರುಚಾಲನೆ ನೀಡಲು ನಿರ್ಧರಿಸಿದೆ. ಅಲ್ಲದೆ ಇದರೊಂದಿಗೆ ನೇರ ನೇಮಕಾತಿಯ ಗರಿಷ್ಠ ವಯೋಮಿತಿಯನ್ನು ಸಡಿಲಿಕೆ ಮಾಡಿ ಮಹತ್ವದ ಆದೇಶ ಹೊರಡಿಸಿದೆ.

ಹೌದು, ನ್ಯಾಯಮೂರ್ತಿ ಎಚ್.ಎನ್ ನಾಗಮೋಹನ್ ದಾಸ್ ಅವರ ಆಯೋಗದಿಂದ ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ನೀಡಿ ಪರಿಷ್ಕರಿಸುವ ಹಿನ್ನೆಲೆಯಲ್ಲಿ, ಈ ಹಿಂದೆ 2024ರ ಅಕ್ಟೋಬರ್ 28ರಂದು ಹೊರಡಿಸಲಾಗಿದ್ದ ಆದೇಶದ ಪ್ರಕಾರ ಎಲ್ಲಾ ನೇಮಕಾತಿ ಪ್ರಕ್ರಿಯೆಗಳನ್ನು ತಡೆಹಿಡಿಯಲಾಗಿತ್ತು. ಇದೀಗ, ಪರಿಷ್ಕೃತ ಮೀಸಲಾತಿ ನೀತಿಯನ್ನು ಅಳವಡಿಸಿ, ಸ್ಥಗಿತಗೊಂಡಿದ್ದ ನೇಮಕಾತಿ ಪ್ರಕ್ರಿಯೆಗಳಿಗೆ ಶೀಘ್ರದಲ್ಲೇ ಮರುಚಾಲನೆ ನೀಡಲು ಸರ್ಕಾರ ನಿರ್ಧರಿಸಿದೆ.
ಇದನ್ನೂ ಓದಿ:Dasara: ಮೈಸೂರು ದಸರಾ: ಜಂಬೂಸವಾರಿ ಟಿಕೆಟ್, ಗೋಲ್ಡ್‌ಕಾರ್ಡ್ ಟಿಕೆಟ್ ಆರಂಭ: ಟಿಕೆಟ್ ಬೆಲೆ ಇಲ್ಲಿದೆ
ಅಲ್ಲದೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳಿಗೆ ಮಾಡುವ ನೇರ ನೇಮಕಾತಿಗಳಲ್ಲಿ ಅಭ್ಯರ್ಥಿಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಯ ಕ್ರಮವಾಗಿ ಸಡಿಲಿಕೆ ಮಾಡಲಾಗಿದೆ.
Comments are closed.