CM Siddaramaiah : ಬಾನು ಮುಷ್ತಾಕ್ ಕನ್ನಡದ ವಿರುದ್ಧ ಮಾತನಾಡಿದ್ದಕ್ಕೆ ಸಾಕ್ಷಿಯಿಲ್ಲ – ಸಿಎಂ ಸಿದ್ದರಾಮಯ್ಯ

CM Siddaramaiah : ಮೈಸೂರು ದಸರಾ ಉದ್ಘಾಟಿಸಲು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಸರ್ಕಾರ ಆಹ್ವಾನಿಸಿದ್ದು ಬಿಜೆಪಿ ಮತ್ತು ಹಿಂದೂ ಸಂಘಟನೆಗಳು ಸರ್ಕಾರದ ನಡೆಯನ್ನು ವಿರೋಧಿಸಿವೆ. ಅಷ್ಟೇ ಅಲ್ಲದೆ ಈ ಪ್ರಕರಣವನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಹೈಕೋರ್ಟ್ ಮೆಟ್ಟಿಲನ್ನು ಏರಿದ್ದಾರೆ. ಆದ್ರೆ ಇದೀಗ ಆಹ್ವಾನಿಸುವ ತಮ್ಮ ಸರ್ಕಾರದ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ:Maoists: ಜಾರ್ಖಂಡ್‌ನಲ್ಲಿ ಎನ್‌ಕೌಂಟರ್: ಮೋಸ್ಟ್ ವಾಂಟೆಡ್ ಮಾವೋವಾದಿಯ ಹ*ತ್ಯೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾನು ಮುಷ್ತಾಕ್ ಅವರು ಕನ್ನಡದ ವಿರುದ್ಧ ಮಾತನಾಡಿದ್ದಾರೆಂಬ ಆರೋಪಕ್ಕೆ ಯಾವುದೇ ಸಾಕ್ಷಿಗಳಿಲ್ಲ. ಅವರು ಕನ್ನಡದಲ್ಲಿ ಬರೆದ ಕೃತಿಯ ಅನುವಾದಕ್ಕೆ ಬುಕರ್ ಪ್ರಶಸ್ತಿ ಬಂದಿದೆ. ಹೀಗಾಗಿ ಸರ್ಕಾರ ಬಾನು ಮುಷ್ತಾಕ್ ಹಾಗೂ ಆ ಕೃತಿಯನ್ನು ಅನುವಾದಿಸಿದ ದೀಪಾ ಭಸ್ತಿಯವರಿಗೆ ಸನ್ಮಾನಿಸಿದೆ. ಬಾನು ಮುಷ್ತಾಕ್ ಕನ್ನಡ ಸಾಹಿತಿ ಆಗಿರುವುದರಿಂದ ದಸರಾ ಉದ್ಘಾಟಿಸಲಿದ್ದಾರೆ. ಇದನ್ನು ವಿರೋಧಗಳು ರಾಜಕೀಯ ಪ್ರೇರಿತ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
Comments are closed.