Maoists: ಜಾರ್ಖಂಡ್‌ನಲ್ಲಿ ಎನ್‌ಕೌಂಟರ್: ಮೋಸ್ಟ್ ವಾಂಟೆಡ್ ಮಾವೋವಾದಿಯ ಹ*ತ್ಯೆ

Share the Article

Maoists: ಜಾರ್ಖಂಡ್‌ನ (Jharkhand) ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಗೋಯಿಲ್‌ಕೇರಾ ಪೊಲೀಸ್ ಠಾಣಾ (Goilkera Police Station) ವ್ಯಾಪ್ತಿಯಲ್ಲಿ ಬರುವ ಬುರ್ಜುವಾ ಬೆಟ್ಟದಲ್ಲಿ ಭಾನುವಾರ (ಸೆ.7) ಬೆಳಗ್ಗೆ, ಭದ್ರತಾ ಪಡೆ ಹಾಗೂ ಮಾವೋವಾದಿಗಳ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ಮಾವೋವಾದಿಯನ್ನು ಭದ್ರತಾ ಪಡೆಗಳು (Security Forces) ಹತ್ಯೆಗೈದಿದ್ದಾರೆ.

ಇದನ್ನೂ ಓದಿ:Divorce : ಸಿಇಒ ತಬ್ಬಿಕೊಂಡಿದ್ದ ಮಹಿಳೆ ಬಾಳಲ್ಲಿ ಬಿರುಕು – ಡಿವೋರ್ಸ್‌ ಕೊಟ್ಟ ಪತಿ

ಈ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದು, ಎನ್‌ಕೌಂಟರ್ ಬಳಿಕ ನಡೆದ ಶೋಧ ಕಾರ್ಯಾಚರಣೆಯಲ್ಲಿ ಶವವೊಂದು ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಸಿಪಿಐನ (ಮಾವೋವಾದಿ) ಸ್ವಯಂ ಘೋಷಿತ ವಲಯ ಕಮಾಂಡರ್ ಅಮಿತ್ ಹನ್ಸ್ದಾ ಅಲಿಯಾಸ್ ಆಪ್ತಾನ್ ಎಂದು ಗುರುತಿಸಲಾಗಿದೆ. ಈ ಮೊದಲು ಈ ವ್ಯಕ್ತಿಯನ್ನು ಪತ್ತೆಹಚ್ಚಿದರೆ 10 ಲಕ್ಷ ರೂ. ನೀಡುವುದಾಗಿ ಘೋಷಿಸಲಾಗಿತ್ತು.

Comments are closed.