PM Modi: ಬಿಜೆಪಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೊನೆಯ ಸಾಲಲ್ಲಿ ಕುಳಿತ ಮೋದಿ!!

Share the Article

PM Modi: ರಾಷ್ಟ್ರಪತಿಗಳ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಎನ್ ಡಿಎ ಮೈತ್ರಿಕೂಟಗಳು ಸೇರಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಿದ್ದರು. ಆದರೆ ಈ ವೇಳೆ ಅವರು ಸಾಮಾನ್ಯ ಕಾರ್ಯಕರ್ತನಂತೆ ಕೊನೆ ಸಾಲಲ್ಲಿ ಕೂತು ಸಂಸದರ ಹೊಗಳಿಕೆಗೆ ಪಾತ್ರರಾಗಿದ್ದಾರೆ.

ಹೌದು, ಬಿಜೆಪಿ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಭಾಗವಹಿಸಿದ್ದರು. ಈ ವೇಳೆ ಅವರು ಕೊನೆಯ ಸಾಲಿನಲ್ಲಿ ಸಾಮಾನ್ಯರಂತೆ ಕುಳಿತಿದ್ದರು ಎಂದು ಸಂಸದರು ಹೇಳಿದ್ದಾರೆ. ಅಲ್ಲದೆ ಈ ಕುರಿತಂತೆ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಬಿಜೆಪಿ ಸಂಸದ, ನಟ ರವಿ ಕಿಶನ್ ಪ್ರಧಾನಿ ಮೋದಿಯ ಫೋಟೋ ಒಂದು ಹಂಚಿಕೊಂಡಿದ್ದಾರೆ. ಉಪ ರಾಷ್ಟ್ರಪತಿ ಚುನಾವಣೆ ಕುರಿತು ಬಿಜೆಪಿ ಆಯೋಜಿಸಿದ ಸಭೆಯಲ್ಲಿ ಬಿಜೆಪಿ ಸಂಸದರು, ಸಚಿವರು ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು. ಪ್ರಧಾನಿ ಮೋದಿ ಕೂಡ ಈ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಈ ಸಭೆಯಲ್ಲಿ ಮೋದಿ ಸಭೆಯ ಕೊನೆಯ ಸಾಲಿನ ಆಸನದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋವನ್ನು ರವಿ ಕಿಶನ್ ಹಂಚಿಕೊಂಡು, ಈ ಪಕ್ಷದಲ್ಲಿ ಎಲ್ಲರೂ ಕಾರ್ಯಕರ್ತರೇ. ಇದು ಬಿಜೆಪಿ ಪಕ್ಷದ ಶಕ್ತಿ ಎಂದಿದ್ದಾರೆ.

ಇದನ್ನೂ ಓದಿ:Vice President Election : ನಾಳೆ ಉಪರಾಷ್ಟ್ರಪತಿ ಚುನಾವಣೆ – ತಟಸ್ಥರಾದ 18 ಸಂಸದರು

ಇನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸರಳತೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹೊಗಳಲಾಗುತ್ತಿದೆ. ಈ ಚಿತ್ರವನ್ನು ಬಿಜೆಪಿ ಸಂಸದ ರವಿ ಕಿಶನ್ ಹಂಚಿಕೊಂಡಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭಾ ಸಂಸದರು NDA ಕಾರ್ಯಾಗಾರದಲ್ಲಿ ಭಾಗವಹಿಸಿದ್ದಾರೆ. ಉಪರಾಷ್ಟ್ರಪತಿ ಚುನಾವಣೆ ಮತ್ತು ಮತದಾನದ ಬಗ್ಗೆ ಎಲ್ಲಾ ಸಂಸದರಿಗೆ ತಿಳಿಸಲಾಗಿದೆ. ಈ ಎರಡು ದಿನಗಳ ಕಾರ್ಯಾಗಾರವನ್ನು ಬಿಜೆಪಿ ಆಯೋಜಿಸಿದ್ದು, ಇದರಲ್ಲಿ ಹಲವು ವಿಷಯಗಳ ಕುರಿತು ಚರ್ಚಿಸಲಾಗಿದೆ ಎಂದು ಹೇಳಲಾಗುತ್ತಿದೆ.

 

Comments are closed.