Vice President: ಭಾರತದ ನೂತನ ಉಪರಾಷ್ಟ್ರಪತಿಯಾಗಿ ಸಿ ಪಿ ರಾಧಾಕೃಷ್ಣನ್ ಆಯ್ಕೆ !!

Share the Article

Vice President : ಭಾರತದ ನೂತನ ಉಪರಾಷ್ಟ್ರಪತಿಯಾಗಿ (Vice President Election) ಎನ್​ಡಿಎ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ (CP Radhakrishnan) ಆಯ್ಕೆಯಾಗಿದ್ದಾರೆ.

ಯಸ್, ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿ, ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರು ದೇಶದ 17ನೇ ಉಪ ರಾಷ್ಟ್ರಪತಿಯಾಗಿ ಮಂಗಳವಾರ ಆಯ್ಕೆಯಾಗಿದ್ದಾರೆ. ಅವರು ಉಪ ರಾಷ್ಟ್ರಪತಿ ಚುನಾವಣೆಯಲ್ಲಿ 452 ಮೊದಲ ಪ್ರಾಶಸ್ತ್ಯದ ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.

ಸಿ.ಪಿ ರಾಧಾಕೃಷ್ಣನ್ ಅವರು ತಮ್ಮ ಪ್ರತಿಸ್ಪರ್ಧಿ ಬಿ. ಸುದರ್ಶನ್ ರೆಡ್ಡಿ ವಿರುದ್ಧ 452 ಮತಗಳನ್ನು ಪಡೆಯುವ ಮೂಲಕ ಸ್ಪಷ್ಟವಾಗಿ ಗೆಲುವು ಸಾಧಿಸಿದ್ದಾರೆ. ಸುದರ್ಶನ್ ರೆಡ್ಡಿ ಅವರು 300 ಮತಗಳನ್ನು ಪಡೆದಿದ್ದಾರೆ. ಇವರ ಗೆಲುವಿನ ಅಂತರ 152 ಮತಗಳು.

ಇದನ್ನೂ ಓದಿ:Diet Tips: ತೂಕ ಇಳಿಸಲು ಜೋಳದ ರೊಟ್ಟಿ, ರಾಗಿ ರೊಟ್ಟಿಯಲ್ಲಿ ಯಾವುದು ಬೆಸ್ಟ್?

ತಮಿಳುನಾಡಿನ ಹಿರಿಯ ಬಿಜೆಪಿ ನಾಯಕ ಮತ್ತು ಎರಡು ಬಾರಿ ಲೋಕಸಭಾ ಸಂಸದರಾಗಿದ್ದ ರಾಧಾಕೃಷ್ಣನ್ ಅವರು ಈಗ ದೇಶದ 15ನೇ ಉಪರಾಷ್ಟ್ರಪತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಉಪ ರಾಷ್ಟ್ರಪತಿಗಳು ರಾಜ್ಯಸಭೆಯ ಪದನಿಮಿತ್ತ ಅಧ್ಯಕ್ಷರೂ ಆಗಿರುತ್ತಾರೆ.

Comments are closed.