CM Siddaramaiah: ಹೊಸದಾಗಿ ಜಾತಿಗಣತಿ ಸಮೀಕ್ಷೆಗೆ ರಾಜ್ಯ ಸರ್ಕಾರದ ಒಪ್ಪಿಗೆ: ಸೆ.22ರಿಂದ ಅ.7ರ ವರೆಗೆ ಸಮೀಕ್ಷೆ

CM Siddaramaiah: ಹಿಂದುಳಿದ ವರ್ಗಗಳ ಆಯೋಗದ ನೇತೃತ್ವದಲ್ಲಿ ಹೊಸದಾಗಿ ಜಾತಿ ಜನಗಣತಿ ನಡೆಸಲು ಸಿದ್ದರಾಮಯ್ಯ (CM Siddaramaiah) ನೇತೃತ್ವದ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರ ವರೆಗೆ ಮಧುಸೂದನ್ ನಾಯಕ್ ಸಮಿತಿ ನೇತೃತ್ವದಲ್ಲಿ ಸಮೀಕ್ಷೆ ನಡೆಯಲಿದೆ. ಮರು ಸಮೀಕ್ಷೆಗೆ ಸದ್ಯ 420 ಕೋಟಿ ರೂ. ಖರ್ಚಾಗಲಿದ್ದು, ಅಗತ್ಯಬಿದ್ದರೆ ಹೆಚ್ಚಿನ ಅನುದಾನ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದರು.

ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂCM l(Siddaramaiah), ಪ್ರತಿಯೊಬ್ಬರಿಗೂ ಸಮಾನತೆ ಕಲ್ಪಿಸುವ ಉದ್ದೇಶದಿಂದ ಈ ಗಣತಿ ಮುಖ್ಯವಾಗಿದ್ದು, ಎಲ್ಲಾ ನಾಗರಿಕರೂ ಪಾಲ್ಗೊಳ್ಳಬೇಕು, ಸಮೀಕ್ಷೆಯಲ್ಲಿ ಕೇಳುವ 60 ಪ್ರಶ್ನೆಗಳಿಗೆ ಉತ್ತರಿಸಬೇಕು ಎಂದು ಕರೆ ನೀಡಿದರು.
ಇದನ್ನೂ ಓದಿ:UGCET: UGCET: ಅಂತಿಮ ಸುತ್ತಿನ ಫಲಿತಾಂಶ ಪ್ರಕಟ!
ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ವರೆಗೆ ಸಮೀಕ್ಷೆ:
ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ವರೆಗೆ ಸಮೀಕ್ಷೆ ನಡೆಯಲಿದೆ. 7 ಕೋಟಿ ಜನರ ಸಾಮಾಜಿಕ, ಶೈಕ್ಷಣಿಕ ಮಾಹಿತಿ ಪಡೆಯಲು ಹಿಂದುಳಿದ ವರ್ಗಗಳ ಆಯೋಗದಿಂದ ಸಮೀಕ್ಷೆ ನಡೆಸಲಿದ್ದು, ಮಧುಸೂದನ್ ನಾಯಕ್ ನೇತೃತ್ವದ ಆಯೋಗದಿಂದ ಸಮೀಕ್ಷೆ ನಡೆಯಲಿದೆ. ಜಾಗ್ರತೆಯಿಂದ ಸರ್ವೆ ಮಾಡಿ ವರದಿ ಕೊಡಲು ಸೂಚನೆ ನೀಡಲಾಗಿದೆ. ಡಿಸೆಂಬರ್ ಒಳಗೆ ವರದಿ ಕೊಡುವುದಾಗಿ ಹೇಳಿದ್ದಾರೆ ಎಂದು ಮಾಹಿತಿ ನೀಡಿದರು.
Comments are closed.