Tulu Movie: ಮೈಸೂರು ದಸರಾ ಚಲನಚಿತ್ರೋತ್ಸವಕ್ಕೆ “ಪಿದಾಯಿ” ತುಳು ಸಿನಿಮಾ ಆಯ್ಕೆ

Share the Article

Tulu Movie: ಈ ವರ್ಷದ ಮೈಸೂರು ದಸರಾ ಉತ್ಸವದ ಅಂಗವಾಗಿ ನಡೆಯುವ ಚಲನಚಿತ್ರೋತ್ಸವಕ್ಕೆ ಪಿದಾಯಿ ತುಳು ಚಿತ್ರ (Tulu Movie) ಆಯ್ಕೆಯಾಗಿದ್ದು ಚಿತ್ರವು ಮೈಸೂರಿನಲ್ಲಿ ಸೆಪ್ಟೆಂಬರ್‌ 18, ಗುರುವಾರದಂದು ಮಧ್ಯಾಹ್ನ 1:15ಕ್ಕೆ ಪ್ರದರ್ಶನಗೊಳ್ಳಲಿದೆ.

ನಮ್ಮ ಕನಸು ಬ್ಯಾನರಿನಲ್ಲಿ ಕೆ. ಸುರೇಶ್ ಅವರು ನಿರ್ಮಾಣ ಮಾಡಿದ, ರಮೇಶ್ ಶೆಟ್ಟಿಗಾರ್ ಬರೆದು, ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕರಾದ ಸಂತೋಷ್ ಮಾಡ ನಿರ್ದೇಶನದಲ್ಲಿ ಮೂಡಿ ಬಂದಿದೆ.

ಪಿದಾಯಿ ಚಿತ್ರವು ಕೊಲ್ಕತ್ತ, ಸಿಮ್ಲಾ, ಜಾರ್ಖಂಡ್‌ ಹಾಗೂ ಕ್ಯಾಲಿಫೋರ್ನಿಯಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅಧಿಕೃತವಾಗಿ ಆಯ್ಕೆಯಾಗುವುದರ ಜೊತೆಗೆ, 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಥಮಬಾರಿಗೆ ತುಳು ಚಿತ್ರವೊಂದು ಭಾರತೀಯ ಚಲನಚಿತ್ರ ಹಾಗೂ ಕನ್ನಡ ಚಲನಚಿತ್ರ ಹೀಗೆ ಎರಡೂ ವಿಭಾಗಗಳ‌ಲ್ಲಿ ಸ್ಪರ್ಧೆಯಲ್ಲಿದ್ದು ಅಂತಿಮವಾಗಿ ಎರಡನೇ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಇದೀಗ ಮೈಸೂರು ದಸರಾ ಚಲನಚಿತ್ರೋತ್ಸವಕ್ಕೂ ಆಯ್ಕೆಯಾಗಿದೆ.

ರಾಷ್ಟ್ರ ಪ್ರಶಸ್ತಿ ವಿಜೇತ ಜೀಟಿಗೆ ಚಿತ್ರದ ಛಾಯಾಗ್ರಾಹಕರಾದ ಉಣ್ಣಿ ಮಾಡವೂರ್‌ರವರು ಈ ಸಿನಿಮಾದ ಛಾಯಾಗ್ರಹಣವನ್ನು ನಿಭಾಯಿಸಿದ್ದಾರೆ. ಎರಡು ಸಲ ರಾಷ್ಟ್ರ ಪ್ರಶಸ್ತಿ ವಿಜೇತರಾಗಿ, ವಿಶ್ವದಲ್ಲೇ ಅತೀಹೆಚ್ಚು ಸಿನಿಮಾ ಸಂಕಲನ ಮಾಡಿ ದಾಖಲೆ ಹೊಂದಿರುವ ಸುರೇಶ್ ಅರಸ್ ಅವರು ಈ ಚಿತ್ರಕ್ಕೆ ಸಂಕಲನಕಾರರಾಗಿದ್ದಾರೆ. ಸಂಭಾಷಣೆಯನ್ನು ರಮೇಶ್‌ ಶೆಟ್ಟಿಗಾರ್‌ ಹಾಗೂ ಡಿ.ಬಿ.ಸಿ ಶೇಖರ್‌ ಜೊತೆಗೂಡಿ ಬರೆದಿದ್ದಾರೆ.

ಈ ಚಿತ್ರದಲ್ಲಿ “ಯತ್ರ ನಾರ್ಯಸ್ತು ಪೂಜ್ಯಂತೇ ರಮಂತೇ ತತ್ರ ದೇವತಾಹಃ” [ಎಲ್ಲಿ ಸ್ತ್ರೀಯರನ್ನು ಗೌರವಿಸಲಾಗುತ್ತದೋ ಅಲ್ಲಿ ದೇವರು ನೆಲೆಸುತ್ತಾರೆ] ಎಂಬ ಉಲ್ಲೇಖವಿದೆ.

Comments are closed.