Social welfare: 2025-26ನೇ ಸಾಲಿನ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಆಹ್ವಾನ

Social welfare: 2025-26ನೇ ಸಾಲಿನ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ (Social welfare) ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ ಮಾಡಲಾಗಿದೆ.


31/05/2025 ರ ಪೂರ್ವದಲ್ಲಿ ನೊಂದಾಯಿತರಾದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ತಮ್ಮ ಮಕ್ಕಳ ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ (State Scholarship Portal) ಮೂಲಕ ಆನ್‌ಲೈನ್‌ನಲ್ಲಿ ನಡೆಯಲಿದೆ. ಅರ್ಹ ಕಾರ್ಮಿಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯಧನ ಪಡೆಯಲು ನಿಗದಿತ ಕಾಲಮಿತಿಯೊಳಗೆ ಅರ್ಜಿ ಸಲ್ಲಿಸಲು ಈ ಮೂಲಕ ಕೋರಲಾಗಿದೆ.
ಇದನ್ನೂ ಓದಿ:Health Tips: ಮಹಿಳೆಯರು ಮುಟ್ಟಿನ ಸಮಯದಲ್ಲಿ ವ್ಯಾಯಾಮ ಮಾಡುವುದು ಸರಿಯೋ ತಪ್ಪೋ?
ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ: 31/10/2025
ಅರ್ಜಿ ಸಲ್ಲಿಸಲು ವೆಬ್ಸೈಟ್ ವಿಳಾಸ: https://ssp.karnataka.gov.in/
ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಸಹಾಯವಾಣಿ 155214 ಅನ್ನು ಸಂಪರ್ಕಿಸಬಹುದು ಎಂದು ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಕಾರ್ಯದರ್ಶಿಗಳು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ತಿಳಿಸಿದೆ.
Comments are closed.