Gruhalakshmi: ‘ಗೃಹಲಕ್ಷ್ಮಿ’ ಯೋಜನೆಯಿಂದ 2 ಲಕ್ಷ ಮಹಿಳೆಯರ ಹೆಸರು ತೆಗೆದುಹಾಕಿದ ಸರ್ಕಾರ !!

Share the Article

Gruhalakshmi : ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯಡಿಯಲ್ಲಿ ಪ್ರತಿ ಮನೆ ಯಜಮಾನಿ ಬ್ಯಾಂಕ್‌ ಖಾತೆಗೆ ಪ್ರತಿ ತಿಂಗಳು 2,000 ರೂಪಾಯಿಗಳನ್ನು ಹಾಕಲಾಗುತ್ತಿದೆ. ಆದರೆ ಇದೀಗ ಬರೋಬ್ಬರಿ 2.13 ಲಕ್ಷ ಮಹಿಳೆಯರ ಹೆಸರನ್ನು ಗೃಹಲಕ್ಷ್ಮಿ ಯೋಜನೆಯಿಂದ ಕೈ ಬಿಡಲು ಸರ್ಕಾರ ನಿರ್ಧರಿಸಿದೆ.

ಹೌದು, ಪತಿ ಅಥವಾ ಪತ್ನಿಯವರು ಆದಾಯ ತೆರಿಗೆ (Income Tax) ಪಾವತಿಸುತ್ತಿರುವುದು ಅಥವಾ ಸರಕು ಮತ್ತು ಸೇವಾ ತೆರಿಗೆ (GST) ರಿಟರ್ನ್ಸ್ ಸಲ್ಲಿಸುತ್ತಿರುವ ಕಾರಣ ಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿದ್ದ ಎರಡು ಲಕ್ಷಕ್ಕೂ ಹೆಚ್ಚು ಮಹಿಳೆಯರ ಹೆಸರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಫಲಾನುಭವಿಗಳ ಪಟ್ಟಿಯಿಂದ ತೆಗೆದುಹಾಕಿದೆ. ಅವರಿನ್ನು ಗೃಹಲಕ್ಷ್ಮಿ ಯೋಜನೆಗೆ ಅರ್ಹರಾಗಿರುವುದಿಲ್ಲ ಎಂದು ಸರ್ಕಾರ ತಿಳಿಸಿದೆ.

ಇದನ್ನೂ ಓದಿ:Kudligi: ಮನೆ ಬಾಗಿಲಿಗೆ ಸಿದ್ದರಾಮಯ್ಯ ಫೋಟೋ ಕೆತ್ತಿಸಿದ ದಂಪತಿ!!

ಜಿಲ್ಲಾ ಆರೋಗ್ಯ ಇಲಾಖೆಯ ಮಾಹಿತಿಯ ಪ್ರಕಾರ, ಆದಾಯ ತೆರಿಗೆ ಪಾವತಿಸುತ್ತಿದ್ದ ಕುಟುಂಬಗಳ 1.08 ಲಕ್ಷ ಮಹಿಳಾ ಮುಖ್ಯಸ್ಥರ ಹೆಸರುಗಳು ಹಾಗೂ ಜಿಎಸ್‌ಟಿ ಪಾವತಿಸುತ್ತಿದ್ದ ಕುಟುಂಬಗಳ 1.04 ಲಕ್ಷ ಮಹಿಳೆಯರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ. ಕುಟುಂಬ ಅಪ್ಲಿಕೇಶನ್‌ನಲ್ಲಿ ಫಲಾನುಭವಿಗಳು ತಮ್ಮ ವಿವರಗಳನ್ನು ನವೀಕರಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಅರ್ಹತೆ ಇಲ್ಲದವರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವುದರಿಂದ ಯೋಜನೆಯ ಹಣ ನಿಜವಾಗಿಯೂ ನೆರವು ಬೇಕಿರುವ ಮಹಿಳೆಯರ ಕೈಗೆ ತಲುಪುತ್ತದೆ.

Comments are closed.