Abhinaya Saraswati: ದಿ ಬಿ.ಸರೋಜಾದೇವಿ ಹೆಸರಿನಲ್ಲಿ `ಅಭಿನಯ ಸರಸ್ವತಿ’ ಪ್ರಶಸ್ತಿ ಘೋಷಣೆ

Abhinaya Saraswati: ಹಿರಿಯ ನಟಿ, ಪಂಚಭಾಷಾ ತಾರೆ ದಿವಂಗತ ಬಿ.ಸರೋಜಾದೇವಿ (B.Sarojadevi) ಅವರ ಹೆಸರಿನಲ್ಲಿ `ಅಭಿನಯ ಸರಸ್ವತಿ’ (Abhinaya Saraswati) ಪ್ರಶಸ್ತಿ ನೀಡುವುದಾಗಿ ರಾಜ್ಯ ಸರ್ಕಾರ (State government) ಘೋಷಣೆ ಮಾಡಿದೆ. ಈ ಪ್ರಶಸ್ತಿಯಡಿಯಲ್ಲಿ 1 ಲಕ್ಷ ರೂ. ನಗದು ಹಾಗೂ 100 ಗ್ರಾಂ ಬೆಳ್ಳಿ ಪದಕ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಪಂಚಭಾಷಾ ತಾರೆ, ಕನ್ನಡ ಚಲನಚಿತ್ರ ನಟಿ, ಪದ್ಮಶ್ರೀ ಹಾಗೂ ಪದ್ಮಭೂಷಣ ವಿಜೇತೆ ದಿವಂಗತ ಬಿ.ಸರೋಜಾದೇವಿ ಅವರು ಪಂಚಭಾಷಾ ತಾರೆಯಾಗಿದ್ದು, ಭಾರತೀಯ ಹಾಗೂ ಕನ್ನಡ ಚಿತ್ರರಂಗಕ್ಕೆ ನೀಡಿರುವ ಕೊಡುಗೆ ಅಪಾರ. ಅದಕ್ಕಾಗಿ “ಅಭಿನಯ ಸರಸ್ಕೃತಿ” ಬಿರುದಿನ ಹೆಸರಿನಲ್ಲಿ ಕನ್ನಡ ಚಿತ್ರರಂಗಕ್ಕೆ ಕನಿಷ್ಠ 25 ವರ್ಷಗಳ ಅವಿಸ್ಮರಣೀಯ ಸೇವೆ ಸಲ್ಲಿಸಿರುವ ಮಹಿಳೆಯರಿಗೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ:Bigg Boss Kannada 12: ‘ಬಿಗ್‌ಬಾಸ್’ ಗಾಗಿ ಕನ್ನಡದ ಟಾಪ್ 3 ಧಾರಾವಾಹಿಗಳು ಅಂತ್ಯ
ಪ್ರಸ್ತುತ ಜಾರಿಯಲ್ಲಿರುವ ಕನ್ನಡ ಚಲನಚಿತ್ರ ನೀತಿ-2011ರಲ್ಲಿನ ವಾರ್ಷಿಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳ ಪಟ್ಟಿ ಅನುಬಂಧ-1ರಡಿಯಲ್ಲಿ ಜಾರಿಗೆ ತರಲಾಗಿದೆ.
Comments are closed.