Yoga Guru: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅ*ಚಾರ: ಯೋಗ ಗುರು ಬಂಧನ

Share the Article

Yoga Guru: ತನ್ನ ಯೋಗ ಸೆಂಟರ್‌ಗೆ ಬರುತ್ತಿದ್ದ ಬಾಲಕಿ, ಯುವತಿಯರು ಸೇರಿ ಎಂಟು ಮಹಿಳೆಯರ ಮೇಲೆ ಅ* ಚಾರ ಮಾಡಿದ ಆರೋಪದ ಅಡಿಯಲ್ಲಿ ಯೋಗ ಗುರು ನಿರಂಜನಾ ಮೂರ್ತಿಯನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧನ ಮಾಡಿದ್ದಾರೆ.

ಹದಿನೇಳು ವರ್ಷದ ಬಾಲಕಿ ನೀಡಿದ ದೂರಿನ ಪ್ರಕಾರ ಪೋಕ್ಸೋ ಕಾಯ್ದೆ ಅಡಿಯಲ್ಲಿ ಕೇಸು ದಾಖಲು ಮಾಡಲಾಗಿದೆ. ಅ*ಚಾರ ಮಾಡಿರುವುದು ತನಿಖೆ ವೇಳೆ ತಿಳಿದು ಬಂದಿದೆ.

ನಿಮಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಯೋಗದಲ್ಲಿ ಹೆಸರು ಬರುವಂತೆ ಮಾಡುತ್ತೇನೆ, ನಿಮಗೆ ಸರಕಾರಿ ಕೆಲಸ ಕೂಡಾ ಇದರಿಂದ ಸಿಗುತ್ತೆ ಎಂದು ನಂಬಿಕೆ ಹುಟ್ಟಿಸಿ, ಯೋಗ ಸೆಂಟರ್‌ಗೆ ಬರುತ್ತಿದ್ದ ಯುವತಿಯರು ಸೇರಿ ಸುಮಾರು ಏಳೆಂಟು ಮಹಿಳೆಯರ ಮೇಲೆ ಅ* ಚಾರ ಮಾಡಿದ್ದ.

ಹದಿನೇಳು ವರ್ಷದ ಬಾಲಕಿಯ ಮೇಲೂ ಅ* ಚಾರ ಎಸಗಿದ್ದು, ಬಾಲಕಿ ನೀಡಿದ ದೂರಿನನ್ವಯ ರಾಜರಾಜೇಶ್ವರಿ ನಗರ ಪೊಲೀಸರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಕೇಸು ದಾಖಲು ಮಾಡಿದ್ದಾರೆ. ಇತ್ತ ಕೇಸು ದಾಖಲು ಮಾಡುತ್ತಿದ್ದಂತೆ ಆರೋಪಿ ತಲೆಮರೆಸಿಕೊಂಡಿದ್ದಾನೆ. ಪೊಲೀಸರು ಆರೋಪಿಯನ್ನು ಬಂಧನ ಮಾಡಿದ್ದು, ತನಿಖೆ ವೇಳೆ ಅ* ಚಾರ ಮಾಡಿರುವುದು ಬಯಲಾಗಿದೆ.

ಈ ಯೋಗ ಗುರುವಿನಿಂದ ಲೈಂಗಿಕ ದೌರ್ಜನ್ಯ ಮತ್ತು ಅ* ಚಾರಕ್ಕೆ ಒಳಗಾಗಿದ್ದರೆ ರಾಜರಾಜೇಶ್ವರಿ ನಗರ ಪೊಲೀಸ್‌ ಠಾಣೆಗೆ ದೂರು ನೀಡಲು ಪೊಲೀಸರು ಸೂಚನೆ ನೀಡಿದ್ದಾರೆ. ದೂರುದಾರರ ಮಾಹಿತಿಯನ್ನು ಗೌಪ್ಯವಾಗಿಡುವುದಾಗಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.

Comments are closed.