Satish Jarakiholi: ಮುಂದಿನ ವಿಧಾನಸಭಾ ಚುನಾವಣೆಗಾಗಿ ಹೊಸ ಹೆಲಿಕ್ಯಾಪ್ಟರ್ ಖರೀದಿಸಿದ ಸತೀಶ್ ಜಾರಕಿಹೊಳಿ !! ಏನಿದರ ವಿಶೇಷತೆ?

Share the Article

Satish Jarakiholi: ಕರ್ನಾಟಕದ ಪ್ರಭಲ ಕಾಂಗ್ರೆಸ್ ನಾಯಕ, ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೊಸ ಹೆಲಿಕಾಪ್ಟರ್‌ ಖರೀದಿಸಿದ್ದಾರೆ. ಇದು ಶೀಘ್ರದಲ್ಲೇ ಅದು ಹಾರಾಟಕ್ಕೆ ಸಿದ್ಧವಾಗಲಿದೆ. ಈ ಕುರಿತಾಗಿ ಸ್ವತಹ ಅವರೇ ಫೇಸ್ಬುಕ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಹೌದು, ಕಾಂಗ್ರೆಸ್ ನ ಪ್ರಬಲ ನಾಯಕ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ನೂತನ ಹೆಲಿಕಾಪ್ಟರ್ ಖರೀದಿಸಿದ್ದು, ಬೆಂಗಳೂರು ಸಮೀಪದ ಜಕ್ಕೂರು ಏರೋಡ್ರೋಮ್‌ನಲ್ಲಿ ಶುಕ್ರವಾರ ನೂತನ ಹೆಲಿಕಾಪ್ಟರ್‌ನ್ನು ಪರಿಶೀಲಿಸಿ, ಶೀಘ್ರವೇ ಇದು ನಮ್ಮೊಂದಿಗೆ ಹಾರಾಟಕ್ಕೆ ಸಿದ್ಧವಾಗಲಿದೆ ಎಂಬ ವಿಷಯವನ್ನು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಉತ್ತರ ಕರ್ನಾಟಕದಲ್ಲಿ ಸ್ವಂತ ಹೆಲಿಕಾಪ್ಟರ್‌ ಹೊಂದಿದ ಮೊದಲ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದು, ಮುಂಬರುವ ವಿಧಾನಸಭೆ ಚುನಾವಣೆ ಸಿದ್ಧತೆಗೆ ಅವರು ನೂತನ ಹೆಲಿಕಾಪ್ಟರ್‌ ಖರೀದಿಸಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:IVF: ಭಾವನ ಮಾತ್ರ ಅಲ್ಲ, ಕನ್ನಡದ ಈ ಖ್ಯಾತ ನಟಿಗೆ ಮೊದಲೆ ಆಗಿತ್ತು IVF ಮಗು !!

ಹೆಲಿಕಾಪ್ಟರ್‌ನ ವಿಶೇಷತೆಗಳೇನು?

ಇತ್ತೀಚಿನ ಎಲ್ಲಾ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿರುವ ಅತ್ಯಾಧುನಿಕ ಡಬಲ್ ಇಂಜಿನ್ ಹೊಂದಿರುವ ಹೆಲಿಕಾಪ್ಟರ್ ಇದಾಗಿದ್ದು, ಐದು ಪ್ರಯಾಣಿಕರು ಮತ್ತು ಇಬ್ಬರು ಪೈಲಟ್ ಅನ್ನು ಕರೆದುಕೊಂಡು ಹೋಗುವ ವ್ಯವಸ್ಥೆ ಹೊಂದಿದೆ. ಈ ಹೆಲಿಕಾಪ್ಟರ್ ಎತ್ತರದಿಂದಲೂ ಲ್ಯಾಂಡಿಂಗ್ ಮತ್ತು ಟೇಕ್ ಆಫ್ ಸಾಮರ್ಥ್ಯವನ್ನು ಹೊಂದಿದೆ. ಚಾಪರ್ ಶಕ್ತಿ ಹೀರಿಕೊಳ್ಳುವ ಆಸನಗಳನ್ನು ಹೊಂದಿದೆ, ಇದು ಅಪಘಾತದ ಸಂದರ್ಭದಲ್ಲಿ ಅದರ ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸುತ್ತದೆ. ಇದಲ್ಲದೆ ಸುಧಾರಿತ ವೈರ್‌ಲೆಸ್ ಸಂವಹನ ವ್ಯವಸ್ಥೆಯನ್ನು ಸಹ ಹೊಂದಿದೆ.

Comments are closed.