KSRTC Bus: ಪ್ರಯಾಣಿಕರಿಗೆ ಬಂಪರ್ ಸಿಹಿ ಸುದ್ದಿ: ಕೆಎಸ್‌ಆರ್‌ಟಿಸಿಯಿಂದ ದಸರಾ ಹಬ್ಬಕ್ಕೆ 2300 ಹೆಚ್ಚುವರಿ ಬಸ್ ಸೇವೆ

KSRTC Bus: ದಸರಾ ಹಬ್ಬದ ಕಾರಣ ಬೆಂಗಳೂರಿನಿಂದ ಊರುಗಳಿಗೆ ತೆರಳುವ ಪ್ರಯಾಣಿಕರಿಗಾಗಿ ಸೆ.26 ರಿಂದ ಕೆಎಸ್‌ಆರ್‌ಟಿಸಿ 2300 ಹೆಚ್ಚುವರಿ ಬಸ್‌ಗಳ ಸೇವೆ ನೀಡುತ್ತಿದೆ. ಸಾಲು ಸಾಲು ರಜೆ ಇರುವ ಕಾರಣ ಬೆಂಗಳೂರಿನಿಂದ ರಾಜ್ಯ ಮತ್ತು ಹೊರರಾಜ್ಯಗಳಿಗೆ ತೆರಳುವ ಅನುಕೂಲಕಕ್ಕಾಗಿ ಸೆ.26,27 ಮತ್ತು ಸೆ.30 ರಂದು ಕೆಎಸ್‌ಆರ್‌ಟಿಸಿ 2,300 ಹೆಚ್ಚುವರಿ ಬಸ್‌ಗಳನ್ನು ಓಡಿಸಲಿದೆ.

ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ, ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣದಿಂದ ಕಾರ್ಯಾಚರಣೆಗಿಳಿಯಲಿದೆ. ಈ ಹೆಚ್ಚುವರಿ ಬಸ್‌ಗಳು ವಿವಿಧ ನಗರಗಳಿಂದ ಬೆಂಗಳೂರಿಗೆ ಅ.2 ಹಾಗೂ 5 ರಂದು ಸೇವೆ ನೀಡಲಿದೆ.
ಇದನ್ನೂ ಓದಿ:MSP FOR MONSOON CROP: ಈ 5 ಧಾನ್ಯಗಳಿಗೆ ಕೇಂದ್ರ ಬೆಂಬಲ ಬೆಲೆ: ರೈತರಿಗೆ ನವರಾತ್ರಿ ಕೊಡುಗೆ
ಮೈಸೂರು ದಸರಾ ವೀಕ್ಷಣೆಗೆ ಬರುವವರಿಗಾಗಿ ಕೆಎಸ್ಸಾರ್ಟಿಸಿ 610 ವಿಶೇಷ ಸಾರಿಗೆ ವ್ಯವಸ್ಥೆ ಮತ್ತು ವಿಶೇಷ ಪ್ಯಾಕೇಜ್ ವ್ಯವಸ್ಥೆ ಮಾಡುತ್ತಿದೆ. ಅದರಲ್ಲಿ ಬೆಂಗಳೂರಿನ ಮೈಸೂರು ರಸ್ತೆ ಬಸ್‌ನಿಲ್ದಾಣದಿಂದ ಮೈಸೂರಿಗೆ 260 ಹೆಚ್ಚುವರಿ ಬಸ್‌ಗಳು ಸೇವೆ ನೀಡಲಿವೆ. ಹಾಗೆಯೇ, ಮೈಸೂರು ಸುತ್ತಮುತ್ತಲ ಪ್ರದೇಶಗಳಾದ ಚಾಮುಂಡಿಬೆಟ್ಟ, ಕೆಆರ್‌ಎಸ್ ಅಣೆಕಟ್ಟು, ಶ್ರೀರಂಗಪಟ್ಟಣ, ನಂಜನಗೂಡು, ಮಡಿಕೇರಿ, ಮಂಡ್ಯ, ಮಳವಳ್ಳಿ, ಎಚ್.ಡಿ.ಕೋಟೆ, ಚಾಮರಾಜನಗರ, ಹುಣಸೂರು, ಕೆ.ಆರ್.ನಗರ ಹಾಗೂ ಗುಂಡ್ಲುಪೇಟೆ ಮತ್ತಿತರ ಸ್ಥಳಗಳಿಗೆ 350 ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆಗಿಳಿಸಲಾಗುತ್ತಿದೆ ಎಂದು ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.
Comments are closed.