MSP FOR MONSOON CROP: ಈ 5 ಧಾನ್ಯಗಳಿಗೆ ಕೇಂದ್ರ ಬೆಂಬಲ ಬೆಲೆ: ರೈತರಿಗೆ ನವರಾತ್ರಿ ಕೊಡುಗೆ

Share the Article

ನವದೆಹಲಿ: ಅತಿವೃಷ್ಟಿಯ ಕರ್ನಾಟಕದ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿಯವರ ಬೇಡಿಕೆ ಮೇರೆಗೆ ನವರಾತ್ರಿ ಕೊಡುಗೆಯಾಗಿ ಬೆಂಬಲ ಬೆಲೆಯಲ್ಲಿ ಐದು ಧಾನ್ಯಗಳ ಖರೀದಿಗೆ ಅನುಮತಿ ನೀಡಿದೆ.

2025-26ನೇ ಸಾಲಿನ ಮುಂಗಾರಿನಲ್ಲಿ ಬೆಳೆದ ಹೆಸರು ಕಾಳು, ಉದ್ದಿನ ಕಾಳು, ನೆಲಗಡಲೆ(ಶೇಂಗಾ), ಸೋಯಾಬಿನ್‌ ಮತ್ತು ಸೂರ್ಯಕಾಂತಿ- ಈ 5 ಧಾನ್ಯಗಳನ್ನು ಕೇಂದ್ರದ ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ನಿರ್ದೇಶನ ನೀಡಿದೆ. ಈ ಕುರಿತು ಕೇಂದ್ರ ಕೃಷಿ ಸಚಿವರು ಆಹಾರ ಸಚಿವ ಪ್ರಲ್ಹಾದ್ ಜೋಷಿ ಖುದ್ದು ಪತ್ರ ಬರೆದು ಮಾಹಿತಿ ನೀಡಿದ್ದಾರೆ.

ಕೇಂದ್ರ ಕೃಷಿ ಸಚಿವ ಶಿವರಾಜ ಸಿಂಗ್‌ ಚೌಹಾಣ್ ಅವರು ತಮ್ಮ ಮನವಿಗೆ ತ್ವರಿತ ಸ್ಪಂದನೆ ನೀಡಿ ರಾಜ್ಯದ ರೈತರ ನೆರವಿಗೆ ಧಾವಿಸಿದ್ದಾರೆ. ಈ ಬೆಳೆಗಾರರ ಹಿತದೃಷ್ಟಿಯಿಂದ ಬೆಂಬಲ ಬೆಲೆಯಲ್ಲಿ ಆಹಾರ ಧಾನ್ಯ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ್ದಾರೆ.

ಎಷ್ಟು ಬೆಂಬಲ ಬೆಲೆ?
2025-26ನೇ ಕೇಂದ್ರ ಬೆಂಬಲ ಬೆಲೆ ಯೋಜನೆಯಲ್ಲಿ ಸಾಲಿನಲ್ಲಿ ಕರ್ನಾಟಕದಿಂದ 38,000 ಮೆಟ್ರಿಕ್‌ ಟನ್‌ ಹೆಸರು ಕಾಳು, 60,810 MT ಉದ್ದು, 15,650 MT ಸೂರ್ಯಕಾಂತಿ, 61,148 MT ಕಡಲೆಬೀಜ ಮತ್ತು 1,15,000 MT ಸೋಯಾಬಿನ್ ಖರೀದಿಗೆ ಅನುಮತಿ ನೀಡಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ, ಕರ್ನಾಟಕದ ರೈತರಿಗೆ ಕಲ್ಪಿಸಿರುವ ಈ ಬೆಂಬಲ ಬೆಲೆ ನೆರವನ್ನು ರಾಜ್ಯ ಸರ್ಕಾರ ತ್ವರಿತ ಒದಗಿಸಬೇಕು. ಈ ಕೂಡಲೇ ಜಿಲ್ಲಾವಾರು ಖರೀದಿ ಕೇಂದ್ರಗಳನ್ನು ತೆರೆದು ಧಾನ್ಯಗಳ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಬೇಕೆಂದು ಸಚಿವ ಜೋಶಿ ಒತ್ತಾಯಿಸಿದ್ದಾರೆ. ರೈತರ ಸಂಕಷ್ಟ ಅರಿತು ಈ ಮೂಲಕ ನೆರವಿಗೆ ಬಂದ ಪ್ರಧಾನಿ ಮೋದಿ ಮತ್ತು ಕೇಂದ್ರ ಕೃಷಿ ಸಚಿವ ಶಿವರಾಜ ಸಿಂಗ್‌ ಚೌಹಾಣ್’ಗೆ ಸಚಿವ ಪ್ರಲ್ಹಾದ್ ಜೋಶಿ ರೈತರ ಧನ್ಯವಾದ ಅರ್ಪಿಸಿದ್ದಾರೆ.

Comments are closed.