Home Education SSLC, ದ್ವಿತೀಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

SSLC, ದ್ವಿತೀಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

Open Book Exam

Hindu neighbor gifts plot of land

Hindu neighbour gifts land to Muslim journalist

SSLC Exam: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ 2026 ರ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಶನಿವಾರ ಪ್ರಕಟಗೊಂಡಿದೆ. ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಜಾಲತಾಣದಲ್ಲಿ www.kseab.karnataka.gov.in ವೇಳಾಪಟ್ಟಿಯನ್ನು ಪ್ರಕಟ ಮಾಡಿದೆ.

ಆಕ್ಷೇಪಣೆಗಳನ್ನು ಮಂಡಲಿಯ ಇ-ಮೇಲ್‌ ವಿಳಾಸ: chairpersonkseab@gmail.com ಗೆ ಹಾಗೂ ಹಾರ್ಡ್‌ ಪ್ರತಿಯನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲ,6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003 ಇಲ್ಲಿಗೆ ನಿಗದಿತ ಸಮಯದೊಳಗೆ ಕಳುಹಿಸಬೇಕು. ನಂತರ ಬರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

2026ರ ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ
ದ್ವಿತೀಯ ಪಿಯುಸಿ ಪರೀಕ್ಷೆ – 1 ರ ತಾತ್ಕಾಲಿಕ ವೇಳಾಪಟ್ಟಿಯಂತೆ ಮೊದಲ ಪರೀಕ್ಷೆ 2026ರ ಫೆಬ್ರವರಿ 28 ರಂದು ನಡೆಯಲಿದೆ. ಮಾರ್ಚ್ 17 ರಂದು ಕೊನೆಯ ಪರೀಕ್ಷೆ ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆ – 2 ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಾರ, 2026ರ ಏಪ್ರಿಲ್ 25 ರಂದು ಪರೀಕ್ಷೆ ಶುರುವಾಗಿ, ಮೇ 9 ರಂದು ಕೊನೆಗೊಳ್ಳಲಿದೆ.

ಇದನ್ನೂ ಓದಿ:KSRTC Bus: ಪ್ರಯಾಣಿಕರಿಗೆ ಬಂಪರ್‌ ಸಿಹಿ ಸುದ್ದಿ: ಕೆಎಸ್‌ಆರ್‌ಟಿಸಿಯಿಂದ ದಸರಾ ಹಬ್ಬಕ್ಕೆ 2300 ಹೆಚ್ಚುವರಿ ಬಸ್‌ ಸೇವೆ

2026ರ ಎಸ್​ಎಸ್​ಎಲ್​ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ
ಎಸ್​ಎಸ್​ಎಲ್​ಸಿ ಪರೀಕ್ಷೆ – 1 ರ ತಾತ್ಕಾಲಿಕ ವೇಳಾಪಟ್ಟಿಯಂತೆ ಪರೀಕ್ಷೆ 2026ರ ಮಾರ್ಚ್ 18 ರಂದು ಆರಂಭವಾಗಿ ಏಪ್ರಿಲ್ 1 ರಂದು ಕೊನೆಗೊಳ್ಳಲಿದೆ. ಎಸ್​ಎಸ್​ಎಲ್​ಸಿ ಪರೀಕ್ಷೆ – 2 ರ ತಾತ್ಕಾಲಿಕ ವೇಳಾಪಟ್ಟಿಯಂತೆ ಮೇ 18ರಂದು ಪರೀಕ್ಷೆ ಆರಂಭವಾಗಿ ಮೇ 25 ರಂದು ಕೊನೆಗೊಳ್ಳಲಿದೆ.