Cinema Ticket: ಸಿನಿಮಾ ಟಿಕೆಟ್‌ ದರ ರೂ.200 ನಿಗದಿ: ಸರಕಾರದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

Share the Article

Cinema Ticket: ಮಲ್ಟಿಫ್ಲೆಕ್ಸ್‌ ಸೇರಿ ರಾಜ್ಯದ ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆಯ ಚಲನಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ ರೂ.200 ಏಕರೂಪ ದರ ನಿಗದಿ ಮಾಡಿರುವ ರಾಜ್ಯ ಸರಕಾರ ಜಾರಿಗೆ ತಂದಿರುವ ನಿಯಮಗಳಿಗೆ ಹೈಕೋರ್ಟ್‌ ಮಂಗಳವಾರ (ಸೆ.23) ಮಧ್ಯಂತರ ತಡೆ ನೀಡಿದೆ.

ಹೊಂಬಾಳೆ ಫಿಲ್ಮ್ಸ್‌, ಮಲ್ಟಿಫ್ಲೆಕ್ಸ್‌ ಅಸೋಸಿಯೇಷನ್‌ ಆಫ್‌ ಇಂಡಿಯಾ, ಪಿವಿಆರ್‌ ಐನಾಕ್ಸ್‌ ಲಿಮಿಟೆಡ್‌, ಕೀಸ್ಟೋರ್‌ ಎಂಟರ್‌ಟೈನ್‌ಮೆಂಟ್‌, ವಿ ಕೆ ಫಿಲ್ಮ್ಸ್‌ ಮತ್ತು ಸಿನಿಫ್ಲೆಕ್ಸ್‌ ಪ್ರವೇಟ್‌ ಲಿಮಿಟೆಡ್‌ ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿ, ಕಾಯ್ದಿರಿಸಿದ ಆದೇಶವನ್ನು ನ್ಯಾಯಮೂರ್ತಿ ರವಿ ಹೊಸಮನಿ ಏಕಸದಸ್ಯ ನ್ಯಾಯಪೀಠ ಮಂಗಳವಾರ ಪ್ರಕಟ ಮಾಡಿತು.

ಕರ್ನಾಟಕ ಸಿನಿಮಾ (ನಿಯಂತ್ರಣ) (ತಿದ್ದುಪಡಿ) ನಿಯಮಗಳು-2025 ತಡೆ ಕೋರಿರುವ ಮಧ್ಯಂತರ ಕೋರಿಕೆಯನ್ನು ಪುರಸ್ಕರಿಸಲಾಗಿದ್ದು, ಮುಂದಿನ ಆದೇಶದವರೆಗೆ ಇದು ಜಾರಿಯಲ್ಲಿದೆ ಎಂದು ನ್ಯಾಯಾಲಯ ಆದೇಶ ನೀಡಿದೆ.

Comments are closed.