Karnataka: ರಾಜ್ಯ ಸರ್ಕಾರದಿಂದ `ಬ್ರಾಹ್ಮಣ ಸಮುದಾಯ’ಕ್ಕೆ ಸ್ವಉದ್ಯಮ ನೇರ ಸಾಲ

Share the Article

Karnataka: ಕರ್ನಾಟಕ (Karnataka) ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದ 2025-26ನೇ ಸಾಲಿನ ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಬ್ರಾಹ್ಮಣ ಸಮುದಾಯದವರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯಡಿಯಲ್ಲಿ ಹಸುಸಾಗಣಿಕೆ, ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ ಇತ್ಯಾದಿ ವ್ಯಾಪಾರ ವಹಿವಾಟುಗಳನ್ನು ಕೈಗೊಳ್ಳಲು ಕನಿಷ್ಠ 1 ಲಕ್ಷದಿಂದ ಗರಿಷ್ಟ 2 ಲಕ್ಷದವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ.

ಆಸಕ್ತ ಅರ್ಜಿದಾರರು ಆರ್ಥಿಕವಾಗಿ ಹಿಂದುಳಿದ ಪ್ರಮಾಣ ಪತ್ರ (EWS ಪ್ರಮಾಣ ಪತ್ರ) ಹೊಂದಿರಬೇಕು. ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. 18 ರಿಂದ 65 ವರ್ಷದ ಒಳಗಿನವರಾಗಿರಬೇಕು. ಒಂದು ಕುಟುಂಬದಿಂದ ಒಬ್ಬರು ಮಾತ್ರ ಅರ್ಜಿ ಸಲ್ಲಿಸಬಹುದು. ಆಸಕ್ತರು ವೆಬ್ ಸೈಟ್ www.ksbdb.Karnataka.gov.in ನಲ್ಲಿ ಅಕ್ಟೋಬರ್ 31, 2025 ರಂದು ಸಂಜೆ 5.00 ಗಂಟೆಯೊಳೆಗೆ ಅರ್ಜಿಗಳನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ, ಬೆಂಗಳೂರು ನಗರ ಜಿಲ್ಲೆ, #55, ನೆಲ ಮಹಡಿ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ, ರಿಸಲ್ದಾರ್ ರಸ್ತೆ, ಶೇಷಾದ್ರಿಪುರ, ಬೆಂಗಳೂರು – 560020 ಅಥವಾ ದೂರವಾಣಿ ಸಂಖ್ಯೆ 080-2960 5888, 8762249230 ಗೆ ಸಂಪರ್ಕಿಸಬಹದು ಎಂದು ಬೆಂಗಳೂರು ನಗರ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.