Veerendra Heggade : ಯಾವ ತಪ್ಪು ಮಾಡದ ನಮ್ಮ ಮೇಲೆ ಯಾಕಿಷ್ಟು ದ್ವೇಷ? ವೀರೇಂದ್ರ ಹೆಗ್ಗಡೆ ಬೇಸರ

Share the Article

Veerendra Heggade: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟಿದ್ದಾರೆ ಎನ್ನುವ ಪ್ರಕರಣದಲ್ಲಿ ಸರ್ಕಾರ ರಚಿಸಿದ ಎಸ್‌ಐಟಿ ರಚಿಸಿ ತನಿಖೆ ನಡೆಸುತ್ತಿದೆ. ಈ ನಡುವೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಎಸ್ ಐ ಟಿ ರಚಿಸಿ ಸತ್ಯ ಹೊರಬರಲು ಕಾರಣವಾದ ಸರ್ಕಾರಕ್ಕೆ ಧನ್ಯವಾದಗಳು ಸಮರ್ಪಿಸುತ್ತೇನೆ ಎಂದು ಹೇಳಿದ್ದಾರೆ.

ಈ ಕುರಿತು ಧರ್ಮಸ್ಥಳದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿರುವುದರಿಂದ ಸತ್ಯ ಹೊರಬರುತ್ತಿದೆ. ಸರ್ಕಾರಕ್ಕೆ ನಾನು ಆಭಾರಿಯಾಗಿದ್ದೇನೆ. ಆದರೆ ಯಾವ ತಪ್ಪು ಮಾಡದೆ, ಯಾರನ್ನೂ ನೋಯಿಸದೆ ಕರ್ತವ್ಯ ನಿಭಾಯಿಸುತ್ತ ಬಂದಿದ್ದೇನೆ. ನನ್ನ ಮೇಲೆ ಕೆಲವರು ಏಕೆ ದ್ವೇಷ ಕಾರುತ್ತಿದ್ದಾರೆ? ಏಕೆ ನಿಷ್ಠುರವಾಗಿ ವರ್ತಿಸುತ್ತಿದ್ದಾರೆ ಎಂದು ಗೊತ್ತಾಗುತ್ತಿಲ್ಲ’ ಎಂದು ಹೇಳಿದರು.

ನಾನು ಹಲವಾರು ಪುಸ್ತಕಗಳನ್ನು ಓದುತ್ತಿದ್ದೇನೆ. ಸಿದ್ಧಗಂಗಾ ಶ್ರೀಗಳ ಹಲವು ಪುಸ್ತಕಗಳನ್ನು ಓದಿದ್ದೇನೆ. ಸಿದ್ಧಗಂಗಾ ಶ್ರೀಗಳು ನಮ್ಮ ಸೇವೆ ಧರ್ಮ ನಮಗೆ ಮುಖ್ಯ ಎಂದು ಹೇಳಿದ್ದರು. ಅದನ್ನು ನಾವು ಮುಂದುವರಿಸಿಕೊಂಡು ಹೋಗುತ್ತಿದ್ದೇವೆ. ಧರ್ಮಸ್ಥಳ ಬೇರೆ, ಧರ್ಮಸ್ಥಳ ಊರಿನವರು ಬೇರೆ ಅಲ್ಲ. ಎಷ್ಟು ನಿಷ್ಟುರವಾಗಿ ನಮ್ಮ ಮೇಲೆ ದಬ್ಬಾಳಿಕೆ ನಡೆದಿದೆ ನೀವು ನೋಡಿದ್ದೀರಿ. ಯಾಕಿಷ್ಟು ದ್ವೇಷ ನನ್ನ ಮೇಲೆ ಇದೆ? ನನಗೆ ಗೊತ್ತಿಲ್ಲ. ಈಗ ಮನಸ್ಸು ಸ್ವಲ್ಪ ಹಗುರವಾಗಿದೆ. ನಮ್ಮ ಮೇಲೆ ದೃಢನಂಬಿಕೆ ಇಟ್ಟ ಎಲ್ಲರಿಗೂ ಧನ್ಯವಾದ. ನಾವು ತಪ್ಪು ಮಾಡದ ಕಾರಣ ನಮಗೆ ಆತ್ಮವಿಶ್ವಾಸವಿದೆ. ಎಸ್‌ಐಟಿ ವರದಿ ಅರ್ಧ ಬಂದ ಕಾರಣ ಇಷ್ಟು ಮಾತನಾಡುತ್ತಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ:GST ಕಡಿತ – ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಗಮನಾರ್ಹ ಬದಲಾವಣೆ?

ಅಲ್ಲದೆ ಈಗಾಗಲೇ ಲಕ್ಷಾಂತರ ಜನರು ಇಲ್ಲಿಗೆ ಬಂದು ಹೋಗಿದ್ದಾರೆ. ನಿಮ್ಮ ಧರ್ಮ ಸೋತರೆ, ನಮ್ಮ ಧರ್ಮ ಸೋತ ಹಾಗೆ ಅಂತ ಹೇಳಿದ್ದಾರೆ. ಈ ಶತ್ರುತ್ವ ಯಾಕೆ ಅಂತ ಕೇಳ್ತಾರೆ, ನನಗೂ ಈ ದ್ವೇಷ ಯಾಕೆ ಅಂತ ಬೇಕು. ನಾವು ಯಾರನ್ನೂ ಹೀಯಾಳಿಸಿಲ್ಲ, ದ್ವೇಷ ಕೂಡ ಮಾಡಿಲ್ಲ. ನಾವು ತಪ್ಪು ಮಾಡದ ಕಾರಣ ನಮಗೆ ಆತ್ಮವಿಶ್ವಾಸ ಇದೆ ಎಂದು ಹೇಳಿದರು.

Comments are closed.