Teacher Tortured Student: 7 ವರ್ಷದ ಬಾಲಕನ ಮೇಲೆ ಶಿಕ್ಷಕಿಯಿಂದ ಶಿಕ್ಷೆ: ಹೋಂ ವರ್ಕ್‌ ಮಾಡದಿದ್ದಕ್ಕೆ ತಲೆ ಕೆಳಗಾಗಿ ನೇತು ಹಾಕಿ ಹಿಂಸೆ

Share the Article

Teacher Tortured Student: ವಿದ್ಯಾರ್ಥಿ ಹೋಂ ವರ್ಕ್‌ ಮಾಡಿಲ್ಲ ಎನ್ನುವ ಕಾರಣಕ್ಕೆ ಆತನ ಕೈ ಕಾಲು ಕಟ್ಟಿ, ತಲೆಕೆಳಗಾಗಿ ನೇತು ಹಾಕಿ ಹಿಂಸೆ ನೀಡಿದ ಘಟನೆ ನಡೆದಿದೆ.

ಹರಿಯಾಣದ ಪಾಣಿಪತ್‌ನ ಶ್ರೀಜನ್‌ ಪಬ್ಲಿಕ್‌ ಶಾಲೆಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿ ಹೋಂ ವರ್ಕ್‌ ಮಾಡಿಲ್ಲ ಎಂದು ಶಿಕ್ಷಕಿಯೊಬ್ಬಳು ಆತನ ಕೈ ಕಾಲು ಕಟ್ಟಿ, ತಲೆಕೆಳಗಾಗಿಸಿ ನೇತು ಹಾಕಿದ್ದು, ಚೆನ್ನಾಗಿ ಥಳಿಸಿದ್ದಾಳೆ.

ಆ.13 ರಂದು ನಡೆದಿದ್ದ ಈ ಘಟನೆಗೆ ಶಾಲಾ ಆಡಳಿತ ಮಂಡಳಿ ಮುಚ್ಚಿಟ್ಟಿದ್ದರು. ಹಲ್ಲೆ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ನಂತರ ಬೆಳಕಿಗೆ ಬಂದಿದೆ.

ಇದನ್ನೂ ಓದಿ:Gold Rate Today: ನವರಾತ್ರಿ ಸಮಯದಲ್ಲಿ ಚಿನ್ನ ಮತ್ತು ಬೆಳ್ಳಿ ಏರಿಕೆ; ಸೆ. 29 ರಂದು ನಿಮ್ಮ ನಗರದಲ್ಲಿ ಎಷ್ಟು ದರ?

ಪೋಷಕರು ಇದೀಗ ವಿಡಿಯೋ ಆಧರಿಸಿ ಠಾಣೆಗೆ ದೂರು ನೀಡಿದ್ದಾರೆ. ದೂರು ನೀಡುತ್ತಿದ್ದಂತೆ ಶಿಕ್ಷಕಿ ಕಡೆಯವರು ಎನ್ನಲಾದ ಕೆಲವು ಮಂದಿ ದೂರು ಹಿಂಪಡೆಯುವಂತೆ ಬೆದರಿಕೆ ಹಾಕಿದ್ದಾರೆಂದು ವರದಿಯಾಗಿದೆ.

Comments are closed.