Kalburgi: ಬೆಳೆ ಹಾನಿಯಾದ ರೈತರಿಗೆ ಹೆಚ್ಚುವರಿ 8500 ರೂ, ಖುಷ್ಕಿಗೆ 17ಸಾವಿರ, ನೀರಾವರಿ 25,500, ತೋಟಗಾರಿಕೆ ಬೆಳೆಗೆ 31 ಸಾವಿರ ರೂ. ಪರಿಹಾರ ಘೋಷಣೆ

Kalburgi: ರಾಜ್ಯದಲ್ಲಿ ಮಳೆ, ಪ್ರವಾಹದಿಂದ ಸಂಭವಿಸಿದ ಬೆಳೆಹಾನಿಗೆ ಎನ್‌ಡಿಆರ್‌ಎಫ್ ನಿಯಮದಂತೆ ಕೇಂದ್ರದಿಂದ ನೀಡಲಾಗುವ ಪರಿಹಾರದ ಜೊತೆಗೆ ರಾಜ್ಯ ಸರಕಾರದಿಂದ ಹೆಚ್ಚುವರಿಯಾಗಿ ಪ್ರತಿ ಹೆಕ್ಟೇರ್‌ಗೆ 8500 ರೂ. ಸೇರಿಸಿ ನೊಂದ ರೈತರಿಗೆ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಕೇಂದ್ರದ ನೆರವಿಗೆ ಕಾಯದೆ ಸಮೀಕ್ಷೆ ಮುಗಿದ ಕೂಡಲೇ ರಾಜ್ಯದ ಪಾಲಿನ ಪರಿಹಾರ ನೀಡಲಾಗುವುದು ಎಂದು ಕಲಬುರಗಿ, ವಿಜಯಪುರ, ಬೀದರ್, ಯಾದಗಿರಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ತಿಳಿಸಿದ್ದಾರೆ ಎಂದು ವರದಿಯಾಗಿದೆ.
* ಪ್ರವಾಹದಿಂದ ಸಂಕಷ್ಟದಲ್ಲಿರುವ ರೈತರು, ಜನಸಾಮಾನ್ಯರಿಗೆ ನೆರವಾಗುವ ಉದ್ದೇಶದಿಂದ ಎನ್.ಡಿ.ಆರ್.ಎಫ್ ಪರಿಹಾರದ ಜೊತೆಗೆ ಹೆಚ್ಚುವರಿ ಪ್ಯಾಕೇಜ್ ಅನ್ನು ಘೋಷಣೆ ಮಾಡುತ್ತಿದ್ದೇನೆ.
* ಎನ್.ಡಿ.ಆರ್.ಎಫ್ ನಿಯಮದ ಪ್ರಕಾರ ಕುಷ್ಕಿ ಜಮೀನಿಗೆ ಹೆಕ್ಟೇರ್ ಗೆ 8,500ರೂ, ನೀರಾವರಿ ಜಮೀನಿಗೆ ಹೆಕ್ಟೇರ್ ಗೆ 17,000, ಬಹು ವಾರ್ಷಿಕ ಬೆಳೆಗೆ 22,500 ರೂ… pic.twitter.com/uqMPhm9PQ2
— Siddaramaiah (@siddaramaiah) September 30, 2025
ಅಧಿಕಾರಿಗಳ ಜೊತೆ ಸಭೆ ನಡೆಸಿದ, NDRF ನಿಯಮದಡಿ ಖುಷ್ಕಿ, ಜಮೀನಿಗೆ ಪ್ರತಿ ಹೆಕ್ಟೇರ್‌ಗೆ 8500 ಪರಿಹಾರ ಇದ್ದು, ಇದಕ್ಕೆ ಹೆಚ್ಚುವರಿಯಾಗಿ ರಾಜ್ಯದಿಂದ 8500 ರೂ. ಸೇರಿಸಿ ಒಟ್ಟು 17000 ರೂ. ರೈತರಿಗೆ ನೀಡಲಾಗುವುದು ಎಂದು ಸಿಎಂ ಹೇಳಿದ್ದಾರೆ.
ಇದನ್ನು ಟ್ವೀಟ್ ಮೂಲಕ ತಿಳಿಸಿದ್ದು, ಅದೇನೆಂದರೆ
* ಪ್ರವಾಹದಿಂದ ಸಂಕಷ್ಟದಲ್ಲಿರುವ ರೈತರು, ಜನಸಾಮಾನ್ಯರಿಗೆ ನೆರವಾಗುವ ಉದ್ದೇಶದಿಂದ ಎನ್.ಡಿ.ಆರ್.ಎಫ್ ಪರಿಹಾರದ ಜೊತೆಗೆ ಹೆಚ್ಚುವರಿ ಪ್ಯಾಕೇಜ್ ಅನ್ನು ಘೋಷಣೆ ಮಾಡುತ್ತಿದ್ದೇನೆ.
* ಎನ್.ಡಿ.ಆರ್.ಎಫ್ ನಿಯಮದ ಪ್ರಕಾರ ಕುಷ್ಕಿ ಜಮೀನಿಗೆ ಹೆಕ್ಟೇರ್ ಗೆ 8,500ರೂ, ನೀರಾವರಿ ಜಮೀನಿಗೆ ಹೆಕ್ಟೇರ್ ಗೆ 17,000, ಬಹು ವಾರ್ಷಿಕ ಬೆಳೆಗೆ 22,500 ರೂ ಇದೆ. ಈ ಹಣವನ್ನು ಸಮೀಕ್ಷೆ ಮುಗಿದ ತಕ್ಷಣ ಬಿಡುಗಡೆ ಆಗಲಿದೆ.
* ಎನ್.ಡಿ.ಆರ್.ಎಫ್ ಹಣದ ಜೊತೆಗೆ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ಪ್ರತೀ ಹೆಕ್ಟೇರ್ ಗೆ 8,500 ರೂ ಪರಿಹಾರ ಕೊಡಲಿದೆ. ಇದರಿಂದಾಗಿ ಕುಷ್ಕಿ ಜಮೀನಿಗೆ ಹೆಕ್ಟೇರ್ ಗೆ ₹8,500 ರ ಜೊತೆಗೆ ₹8,500 ಸೇರಿ ಒಟ್ಟು ₹17,000 ಸಿಗಲಿದೆ. ನೀರಾವರಿ ಜಮೀನಿಗೆ ₹17,000ದ ಜೊತೆ ₹8,500 ಸೇರಿ ಒಟ್ಟು ₹25,500 ಸಿಗಲಿದೆ. ಬಹುವಾರ್ಷಿಕ ಬೆಳೆಗೆ ಹೆಕ್ಟೇರ್ ಗೆ ₹22,500ರ ಜೊತೆ ₹8,500 ಸೇರಿ ಒಟ್ಟು ₹31,000 ಸಿಗುತ್ತದೆ.
* ಎನ್.ಡಿ.ಆರ್.ಎಫ್ ಮತ್ತು ರಾಜ್ಯ ಸರ್ಕಾರದ ಪ್ಯಾಕೇಜ್ ಸೇರಿ ₹2,000 ದಿಂದ ₹2,500ಕ್ಕೂ ಹೆಚ್ಚು ಕೋಟಿ ಹಣ ಪರಿಹಾರ ಕೊಡುತ್ತಿದ್ದೇವೆ. ಪ್ರವಾಹದಿಂದ ಬೆಳೆ ಜೊತೆಗೆ ಮೂಲಭೂತ ಸೌಕರ್ಯಗಳು ಅಪಾರ ಪ್ರಮಾಣದಲ್ಲಿ ಹಾನಿ ಆಗಿರುವುದರಿಂದ ರಾಜ್ಯಕ್ಕೆ ಪರಿಹಾರ ಒದಗಿಸುವಂತೆ ಕೇಂದ್ರಕ್ಕೆ ಮನವಿ ಮಾಡಲಾಗುವುದು.
Comments are closed.