C M Siddaramaiah: ನಮ್ಮ ಮನೆಯ ಗೃಹಪ್ರವೇಶಕ್ಕೆ ಯಾರೂ ಬರಬೇಡಿ : ಯಾರಾದ್ರೂ ಬಂದ್ರೆ ಹೊರಗೆ ಕಳಿಸ್ತೇನೆ: ಸಿಎಂ ಸಿದ್ದರಾಮಯ್ಯ

Share the Article

C M Siddaramaiah: ಇನ್ನೇನು ಕೆಲವೇ ತಿಂಗಳಲ್ಲಿ ಸಿಎಂ ಸಿದ್ದರಾಮಯ್ಯನವರ ನೂತನ ಮನೆಯ ಗೃಹಪ್ರವೇಶ ನಡೆಯಲಿದೆ. ಈ ಸಂಭ್ರಮಕ್ಕಾಗಿ ಅನೇಕ ಅವರ ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳು, ರಾಜಕೀಯ ಮಿತ್ರರು ಪಾಲ್ಗೊಳ್ಳಲು ಕಾತರದಿಂದ ಕಾಯುತ್ತಿದ್ದಾರೆ. ಆದರೆ ಅವರಿಗೆಲ್ಲಾ ಸಿಎಂ ಸಿದ್ದರಾಮಯ್ಯ ಶಾಕಿಂಗ್‌ ನ್ಯೂಸ್‌ ಒಂದನ್ನು ನೀಡಿದ್ದಾರೆ.

ಮುಂಬರುವ ಡಿಸೆಂಬರ್‌ನಲ್ಲಿ ನಮ್ಮ ಹೊಸ ಮನೆಯ ಗೃಹಪ್ರವೇಶ ಮಾಡಲಾಗುತ್ತಿದ್ದು, ಇದು ಕೇವಲ ಕೌಟುಂಬಿಕ ಸಮಾರಂಭವಾಗಿರಲಿದೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. “ನಾನು ಯಾವುದೇ ರಾಜಕಾರಣಿಗಳನ್ನು, ಕಾರ್ಯಕರ್ತರನ್ನು ಹಾಗೂ ಮಾಧ್ಯಮದವರನ್ನೂ ಕೂಡ ಆಹ್ವಾನಿಸುವುದಿಲ್ಲ. ಒಂದು ವೇಳೆ ನೀವು (ಮಾಧ್ಯಮದವರು) ಬಂದರೂ ಬೇಡ ಎಂದು ಕಳುಹಿಸುತ್ತೇನೆ.

ಇದನ್ನೂ ಓದಿ:Kantara – 1: ‘ಕಾಂತಾರ ಚಾಪ್ಟರ್ 1’ ಸಿನಿಮಾ ಬಗ್ಗೆ ರಾಕಿ ಭಾಯ್‌ ಯಶ್‌ ಏನಂದ್ರು?

ಮೈಸೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ತಾವು ನಿರ್ಮಿಸುತ್ತಿರುವ ಹೊಸ ಮನೆಯ ಕೆಲಸ ಬಹುತೇಕ ಮುಕ್ತಾಯವಾಗಿದೆ. ಪ್ರಸ್ತುತ ತಾವು ವಾಸಿಸುತ್ತಿರುವ ಮನೆಯ ಬಗ್ಗೆ ಮಾತನಾಡಿದ ಅವರು, ನಾನು ಈಗ ಇರುವ ಮನೆ ನನ್ನದಲ್ಲ, ಮರಿಸ್ವಾಮಿ ಅವರದ್ದು” ಎಂದು ಸಿಎಂ ತಿಳಿಸಿದರು. ಮರಿಸ್ವಾಮಿಯೇ ನನಗೆ ಮತ್ತು ನನ್ನ ಮಗನಿಗೆ ಅನ್ನದಾತ. ನಾನು ನೂತನ ಮನೆಗೆ ಸ್ಥಳಾಂತರಗೊಂಡ ಬಳಿಕವೂ, ಮರಿಸ್ವಾಮಿಯವರು ಈ ಮನೆ ಖಾಲಿ ಇಟ್ಟರೆ, ಅದನ್ನು ಸಾರ್ವಜನಿಕರ ಭೇಟಿಗಾಗಿ ಬಳಸಿಕೊಳ್ಳುತ್ತೇನೆ ಎಂದು ಸಿಎಂ ಈ ವೇಳೆ ತಿಳಿಸಿದರು.

Comments are closed.