Pratap Simha: ‘ಕಾಂತಾರ- 1’ ನೋಡಲು 68,920 ಕೊಟ್ಟು ಇಡೀ ಥಿಯೇಟರ್ ಬುಕ್ ಮಾಡಿದ ಪ್ರತಾಪ್ ಸಿಂಹ !!

Share the Article

Prathap Simha: ಕನ್ನಡಿಗರು ಹೆಮ್ಮೆ ಪಡುವಂತಹ ‘ಕಾಂತಾರ: ಚಾಪ್ಟರ್ 1’ 2 ದಿನ ಕೂಡ ಎಲ್ಲ ಕಡೆಗಳಲ್ಲಿ ಹೌಸ್​ಫುಲ್ ಪ್ರದರ್ಶನ ಕಂಡಿದೆ. ಈಗ ವೀಕೆಂಡ್​​ನಲ್ಲಿ ಕೂಡ ಸಿನಿಮಾ ಅಬ್ಬರಿಸಲಿದೆ. ಜನಸಾಮಾನ್ಯರು ಮಾತ್ರವಲ್ಲದೇ ರಾಜಕೀಯ ಕ್ಷೇತ್ರದವರು ಕೂಡ ‘ಕಾಂತಾರ: ಚಾಪ್ಟರ್ 1’ ಬಗ್ಗೆ ಆಸಕ್ತಿ ತೋರಿಸುತ್ತಿದ್ದಾರೆ. ಪ್ರತಾಪ್ ಸಿಂಹ (Pratap Simha) ಅವರು ಸಿನಿಮಾ ನೋಡಲು ಇಡೀ ಚಿತ್ರಮಂದಿರದ ಟಿಕೆಟ್ ಬುಕ್ ಮಾಡಿದ್ದಾರೆ.

ಹೌದು, ಒಟ್ಟು 197 ಟಿಕೆಟಿಗೆ ಪ್ರತಾಪ್‌ ಸಿಂಹ ₹68,920 ಪಾವತಿಸಿ ಥಿಯೇಟರ್‌ ಬುಕ್‌ ಮಾಡಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡ ಮಾಜಿ ಸಂಸದ ಪ್ರತಾಪ್‌ ಸಿಂಹ, ‘ಭಾನುವಾರ 4 ಗಂಟೆಗೆ ಕಾರ್ಯಕರ್ತರೆಲ್ಲ ಸೇರಿ ಕಾಂತಾರ-2 ನೋಡೋಣ, ಡಿಆರ್‌ಸಿಯಲ್ಲಿ ಫುಲ್ ಸ್ಕ್ರೀನ್ ಬುಕ್ ಮಾಡಿದ್ದೇನೆ’ ಎಂದು ಸಾಮಾಜಿಕ ಮಾಧ್ಯಮದಲ್ಲಿ ಬರೆದಿದ್ದಾರೆ.

ಇದನ್ನೂ ಓದಿ:Rupee trades: ಜಾಗತಿಕವಾಗಿ ಹೆಚ್ಚಿನ ರೂಪಾಯಿ ವ್ಯಾಪಾರಕ್ಕೆ ಆರ್‌ಬಿಐ ಏಕೆ ಒತ್ತಾಯಿಸುತ್ತಿದೆ? ಇದರ ಲಾಭವೇನು?

ಅಲ್ಲದೆ ಟಿಕೆಟ್ ಬುಕಿಂಗ್ ವಿವರವನ್ನು ಕೂಡ ಪ್ರತಾಪ್ ಸಿಂಹ ಅವರು ಹಂಚಿಕೊಂಡಿದ್ದಾರೆ. DRCಯಲ್ಲಿ 2ನೇ ಸ್ಕ್ರೀನ್​​ನಲ್ಲಿ ಒಟ್ಟು 197 ಟಿಕೆಟ್​​ಗಳನ್ನು ಅವರು ಬುಕ್ ಮಾಡಿದ್ದಾರೆ. ಇದಕ್ಕಾಗಿ ಅವರು ಒಟ್ಟು 68,920 ರೂಪಾಯಿ ಖರ್ಚು ಮಾಡಿದ್ದಾರೆ. ಸಿನಿಮಾ ನೋಡಿದ ಬಳಿಕ ಅವರು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

Comments are closed.