Weather report: ಕರ್ನಾಟಕದ ಹವಾಮಾನ ವರದಿ ಹೇಗಿದೆ? ಇನ್ನು ಎಷ್ಟು ದಿನ ಕಾಡುತ್ತೆ ಮಳೆ?

Weather report: ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮಧ್ಯಾಹ್ನ ನಂತರ, ಸಂಜೆ ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಧರ್ಮಸ್ಥಳ ಸುತ್ತಮುತ್ತ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಗಾಳಿಯ ಒತ್ತಡ ಹೆಚ್ಚಿದ್ದರೆ ಘಟ್ಟದ ಕೆಳಗಿನ ಪ್ರದೇಶಗಳ ಸುತ್ತಮುತ್ತ ಮಳೆಯ ಸಾಧ್ಯತೆ ಇದೆ.

ಈಗಿನಂತೆ ಒಕ್ಟೊಬರ್ 6 ಮತ್ತು 7ರಂದು ಕರಾವಳಿಯಲ್ಲಿ ಮಳೆ ಬಿಡುವು ಪಡೆದರೂ, 8ರಿಂದ ದಕ್ಷಿಣ ಕನ್ನಡ ಹಾಗೂ 9ರಿಂದ ಇತರ ಕರಾವಳಿ ಜಿಲ್ಲೆಗಳಲ್ಲಿಯೂ ಸಂಜೆಯ ವೇಳೆಗೆ ಅಲ್ಲಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೋಡ ಅಥವಾ ಸಂಜೆ ಗುಡುಗು ಸಹಿತ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಒಕ್ಟೊಬರ್ 5ರಿಂದ ಮಲೆನಾಡು ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಲಿದ್ದು, 8 ರಿಂದ ಗುಡುಗು ಸಹಿತ ಉತ್ತಮ ಮಳೆ ಆರಂಭವಾಗುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಉತ್ತರ ಒಳನಾಡು ಭಾಗಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ.
ಇದನ್ನೂ ಓದಿ;RBI Report: ಆರ್‌ಬಿಐ ಪ್ರಕಾರ, ಯಾವ ರಾಜ್ಯಗಳ ಜನರು ಅತಿ ಹೆಚ್ಚು ನಗದು ವಹಿವಾಟು ನಡೆಸುತ್ತಾರೆ?
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಒಮಾನ್ ಕರಾವಳಿ ತನಕ ಸಾಗಿ ಮತ್ತೆ ತಿರುಗಿ ಗುಜರಾತ್ ಕರಾವಳಿ ಕಡೆ ಪಯಣಿಸುವ ಸೂಚನೆಗಳಿವೆ.
Comments are closed.