Coldrif Syrup: ಕೆಮ್ಮಿನ ಸಿರಪ್‌ ಸೇವಿಸಿ 11 ಮಕ್ಕಳು ಸಾವು ಪ್ರಕರಣ: ಸಿರಪ್‌ಗಳನ್ನು ಶಿಫಾರಸು ಮಾಡ್ತಿದ್ದ ವೈದ್ಯ ಅರೆಸ್ಟ್‌

Share the Article

Coldrif Syrup: ಮಧ್ಯಪ್ರದೇಶದ (Madhya Pradesh) ಛಿಂದ್ವಾರಾದಲ್ಲಿ ಮಕ್ಕಳಿಗೆ ಕೋಲ್ಡ್ರಿಫ್ ಸಿರಪ್ (Coldrif Syrup) ಶಿಫಾರಸು ಮಾಡಿದ ವೈದ್ಯನನ್ನು ಬಂಧಿಸಲಾಗಿದೆ.

ಕಲುಷಿತ ಕೆಮ್ಮಿನ ಸಿರಪ್ ಸೇವಿಸಿದ 11 ಮಕ್ಕಳ ಸಾವಿಗೆ ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಹೆಚ್ಚಿನ ಮಕ್ಕಳಿಗೆ ಪರಾಸಿಯಾದ ಮಕ್ಕಳ ತಜ್ಞ ಡಾ. ಪ್ರವೀಣ್ ಸೋನಿ ಅವರ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಧ್ಯಪ್ರದೇಶ ಸರ್ಕಾರವು ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಿಸಿದ ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯಲ್ಲಿರುವ ಶ್ರೀಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ವಿರುದ್ಧವೂ ಪ್ರಕರಣ ದಾಖಲಿಸಿದೆ. ಸರ್ಕಾರವು ಈ ಹಿಂದೆ ಕೋಲ್ಡ್ರಿಫ್ ಮಾರಾಟವನ್ನು ನಿಷೇಧಿಸಿತ್ತು. ಔಷಧದ ಮಾದರಿಗಳಲ್ಲಿ 48.6% ಡೈಥಿಲೀನ್ ಗ್ಲೈಕೋಲ್ ಇದೆ. ಇದು ಅತ್ಯಂತ ವಿಷಕಾರಿ ವಸ್ತುವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ;BSNL ನಿಂದ ಹೊಸ ಸೇವೆ ಆರಂಭ- ಜಿಯೋ, ಏರ್‌ಟೆಲ್‌ಗೆ ಶಾಕ್ !!

ಇನ್ನು ಮುಖ್ಯಮಂತ್ರಿ ಮೋಹನ್ ಯಾದವ್ ಅವರು, ಈ ಸಾವುಗಳು ಅತ್ಯಂತ ದುರಂತ ಎಂದು ವಿಷಾದಿಸಿದ್ದಾರೆ. ಹೊಣೆಗಾರರ ​​ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Comments are closed.