Weather Report: ನಾಳೆ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಎತ್ತ ಸಾಗಿತು ಚಂಡಮಾರುತ?

Share the Article

Weather Report: ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು, ಮೋಡ ಹಾಗೂ ಸಂಜೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ಒಕ್ಟೊಬರ್ 8ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಂಜೆಯ ವೇಳೆಗೆ ಗುಡುಗು ಸಿಡಿಲು ಸಹಿತ ಮಳೆ ಆರಂಭವಾಗುವ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಶಿವಮೊಗ್ಗ ಹಾಗೂ ಹಾಸನ ಜಿಲ್ಲೆಗಳ ಒಂದೆರಡು ಕಡೆ ಸಂಜೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಒಕ್ಟೊಬರ್ 8ರಿಂದ ಮಲೆನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಮುನ್ಸೂಚನೆ ಇದೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಇದನ್ನೂ ಓದಿ:Mysore Zoo: ಮೃಗಾಲಯಕ್ಕೆ 1.56 ಲಕ್ಷ ಮಂದಿ ಭೇಟಿ : 191.37 ಲಕ್ಷ ಆದಾಯ ಸಂಗ್ರಹ : ಕಳೆದ ಬಾರಿಗಿಂತ ಜನ ಕಮ್ಮಿ, ಆದಾಯ ಜಾಸ್ತಿ

ದಕ್ಷಿಣ ಒಳನಾಡಿನ ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಒಕ್ಟೊಬರ್ 8ರಿಂದ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ 9ರಿಂದ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

ಒಮಾನ್ ಕರಾವಳಿಯ ಚಂಡಮಾರುತವು ಅಲ್ಲಿಯೇ ದುರ್ಬಲಗೊಂಡು ಒಕ್ಟೊಬರ್ 12ರ ಸುಮಾರಿಗೆ ಗುಜರಾತ್ ಸಮೀಪ ತಲಪುವ ನಿರೀಕ್ಷೆ ಇದೆ.

Comments are closed.