ಪ್ರಾದೇಶಿಕ ಭಾಷೆಗಳಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳ ಪರೀಕ್ಷೆ ನಡೆಸುವ ಕುರಿತು ಸಮಿತಿ ರಚಿಸಿದ ಕೇಂದ್ರ | ಟ್ವೀಟ್ ಮಾಡಿದ ಸಚಿವ ಪ್ರಹ್ಲಾದ್ ಜೋಷಿ

ನವದೆಹಲಿ, ಜುಲೈ 14 : ಸ್ಥಳೀಯ ಭಾಷೆಗಳಲ್ಲಿ ಬ್ಯಾಂಕಿಂಗ್ ಪರೀಕ್ಷೆ ನಡೆಸುವ ಕುರಿತು ಸಮಿತಿ ರಚಿಸಲು ನಿರ್ಧರಿಸಿದೆ. ಅದರಿಂದಾಗಿ ಪ್ರಾದೇಶಿಕ ಭಾಷೆಗಳಿಗೆ ಕೇಂದ್ರ ಸರಕಾರವು ಮನ್ನಣೆ ನೀಡಿದಂತಾಗಿದೆ.

ಕೇಂದ್ರ ಸರಕಾರವು, ಆ ಸಮಿತಿಯ ವರದಿ ಬರುವವರೆಗೆ ಎಲ್ಲ ಆಯ್ಕೆ ಪರೀಕ್ಷೆಗಳನ್ನು ತಡೆಹಿಡಿಯಲು ನಿರ್ಧರಿಸಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಈ ಕುರಿತು ಟ್ವಿಟ್ ಮಾಡಿ ತಿಳಿಸಿದ್ದಾರೆ.

ಸ್ಥಳೀಯ ಭಾಷೆಗಳಲ್ಲಿಯೇ ಬ್ಯಾಂಕಿಂಗ್ ಪರೀಕ್ಷೆಗಳನ್ನು ನಡೆಸುವ ಕುರಿತು ಮಂಗಳವಾರ ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮ್ ಜೊತೆಗೆ ಚರ್ಚಿಸಲಾಗಿದ್ದು, ಈ ಕುರಿತು ಒಂದು ಸಮಿತಿಯನ್ನು ರಚಿಸುವುದಾಗಿ ತಿಳಿಸಿದ್ದಾರೆ. ಸಮಿತಿಯ ವರದಿ ಬರುವವರೆಗೆ ಆಯ್ಕೆ ಪರೀಕ್ಷೆಗಳನ್ನು ತಡೆಹಿಡಿಯಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಈಗಾಗಲೆ ಪ್ರಾದೇಶಿಕ ಮತ್ತು ಗ್ರಾಮೀಣ ಬ್ಯಾಂಕಿಂಗ್ ಪರೀಕ್ಷೆಗಳನ್ನು ಕನ್ನಡದಲ್ಲಿಯೇ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಈಗ ರಚಿಸಲಾಗುವ ಸಮಿತಿಯು ರಾಷ್ಟ್ರೀಕೃತ ಬ್ಯಾಂಕ್ ಗಳ ಆಯ್ಕೆಗೆ ನಡೆಯುವ ಪರೀಕ್ಷೆಯ ಬಗ್ಗೆ ತನ್ನ ಅಭಿಪ್ರಾಯವನ್ನು ತಿಳಿಸಲಿದೆ.

https://mobile.twitter.com/JoshiPralhad/status/1414952846101995523/photo/2

Leave A Reply

Your email address will not be published.