CM Siddaramiah : ಬೆಂಗಳೂರಿನ ‘ನಮ್ಮ ಮೆಟ್ರೋ’ ಗೆ ಬಸವ ಮೆಟ್ರೋ ಎಂದು ನಾಮಕರಣ – CM ಸಿದ್ದರಾಮಯ್ಯ ಘೋಷಣೆ!!

CM Siddaramiah : ಕನ್ನಡಿಗರ ಹೆಮ್ಮೆಯಾದ ಬೆಂಗಳೂರಿನ ನಮ್ಮ ಮೆಟ್ರೋ ಗೆ ‘ಬಸವ ಮೆಟ್ರೋ’ ಎಂದು ನಾಮಕರಣ ಮಾಡಲಾಗುವುದು ಇಂದು CM ಸಿದ್ದರಾಮಯ್ಯನವರು ಘೋಷಣೆ ಮಾಡಿದ್ದಾರೆ.

ಹೌದು, ಬೆಂಗಳೂರಿನ ಅರಮನೆ ಮೈದಾನದ ಗೇಟ್ ಸಂಖ್ಯೆ 4ರ ಗಾಯತ್ರಿ ವಿಹಾರದಲ್ಲಿ ನಡೆದ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬೆಂಗಳೂರಿಗರ ಜೀವನಾಡಿ ಆಗಿರುವ ನಮ್ಮ ಮೆಟ್ರೋಗೆ ‘ಬಸವ ಮೆಟ್ರೋ’ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ಘೋಷಿಸಿದ್ದಾರೆ.
ಅಲ್ಲದೆ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಬಣ್ಣಿಸಿ, ಬಸವ ತತ್ವಗಳು ಸಂವಿಧಾನದ ಆಶಯಗಳೊಂದಿಗೆ ಹೊಂದಿಕೊಂಡಿವೆ ಎಂದ ಅವರು ಮುಂದಿನ ವರ್ಷ ವಚನ ವಿಶ್ವವಿದ್ಯಾಲಯ ಸ್ಥಾಪಿಸುವುದಾಗಿಯೂ ಭರವಸೆ ನೀಡಿದರು.
Comments are closed.