BBK 12: ‘ಬಿಗ್ ಬಾಸ್ ಕನ್ನಡ ಸೀಸನ್ 12’ ಬಂದ್ ಆಗುತ್ತಾ? ಸಚಿವ ಈಶ್ವರ ಖಂಡ್ರೆ ಪ್ರತಿಕ್ರಿಯೆ

BBK 12: ಬಿಗ್‌ಬಾಸ್ ಕನ್ನಡ ಸೀಸನ್ 12 ರಿಯಾಲಿಟಿ ಶೋ ಬಂದ್ ಆಗುತ್ತಾ ಎನ್ನುವ ಪ್ರಶ್ನೆಗೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿಕೆ ನೀಡಿದ್ದಾರೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ರಾಮನಗರದ ಅಧಿಕಾರಿಗಳು ಹಿಂದೆಯೇ ನೋಟಿಸ್ ಕೊಟ್ಟಿದ್ದಾರೆ. 2024ರ ಮಾರ್ಚ್ನಲ್ಲೇ ನೋಟಿಸ್ ನೀಡಲಾಗಿತ್ತು. ಪರಿಶೀಲನೆ ವೇಳೆ ಪರವಾನಗಿ ಪಡೆದಿಲ್ಲ ಎಂಬ ಮಾಹಿತಿ ಬಂದಿದೆ. ಸ್ಟುಡಿಯೋದವರು ಪರವಾನಗಿ ಪಡೆದಿಲ್ಲ, ಅರ್ಜಿಯನ್ನೂ ಹಾಕಿಲ್ಲ. ನೋಟಿಸ್ ಕೊಟ್ಟರೂ ಅಮ್ಯೂಸ್ಮೆಂಟ್ ಪಾರ್ಕ್ ನಡೆಸುತ್ತಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ. ಕೋರ್ಟ್ ಮೊರೆ ಹೋಗಲು ಎಲ್ಲರಿಗೂ ಅವಕಾಶ ಇದೆ. ಕಾನೂನು ರೀತಿ ಏನು ಕ್ರಮ ವಹಿಸಬೇಕೋ ಅದನ್ನು ವಹಿಸಲಿ’ ಎಂದಿದ್ದಾರೆ ಸಚಿವ ಈಶ್ವರ ಖಂಡ್ರೆ.
ಇದನ್ನೂ ಓದಿ;BBK 12: ಜಾಲಿವುಡ್ ಸ್ಟುಡಿಯೋಸ್ ಬೀಗ ಹಾಕಿದ ಅಧಿಕಾರಿಗಳು, ಬಿಗ್‌ಬಾಸ್ ಕನ್ನಡ ಸೀಸನ್ 12 ಸ್ಥಗಿತ?
Comments are closed.