Sujata Bhat: ಧರ್ಮಸ್ಥಳಕ್ಕೆ ಹೋಗಿ ವೀರೇಂದ್ರ ಹೆಗ್ಗಡೆಯವರ ಕ್ಷಮೆ ಕೇಳುತ್ತೇನೆ – ಸುಜಾತಾ ಭಟ್

Sujata Bhat : ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣ ಇದೀಗ ತನಿಖೆಯ ಹಂತದಲ್ಲಿದೆ. ಈ ಪ್ರಕರಣದ ತನಿಖೆಯ ನಡುವೆ ಸಾಕಷ್ಟು ಸದ್ದು ಮಾಡಿದ್ದು ಅನನ್ಯ ಭಟ್ ನಾಪತ್ತೆ ಪ್ರಕರಣ. ಅನನ್ಯ ಭಟ್ ತಾಯಿ ಸುಜಾತ ಭಟ್ ದಿಡೀರ್ ಪ್ರತ್ಯಕ್ಷವಾಗಿ ಧರ್ಮಸ್ಥಳದಲ್ಲಿ ನನ್ನ ಮಗಳು ಕಾಣೆಯಾಗಿದ್ದಳು ಎಂದು ಆರೋಪ ಮಾಡಿದ್ದರು. ನಂತರ ಇದು ನಾನು ಕಟ್ಟಿದ ಕಥೆಯೆಂದು ಅವರು ಒಪ್ಪಿಕೊಂಡಿದ್ದರು. ಇದರ ಬೆನ್ನಲ್ಲೇ ಸುಜಾತ ಭಟ್ ನಾನು ಧರ್ಮಸ್ಥಳಕ್ಕೆ ಹೋಗಿ ವೀರೇಂದ್ರ ಹೆಗ್ಗಡೆ ಅವರ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:Dasara Holiday: ಪೋಷಕರೇ ಗಮನಿಸಿ – ಎಲ್ಲಾ ಶಾಲಾ ಮಕ್ಕಳಿಗೆ ವಿಸ್ತರಣೆಯಾಗಿಲ್ಲ ದಸರಾ ರಜೆ !!
ಹೌದು, ಅನನ್ಯಾ ಭಟ್ ಕೇಸ್ ಮತ್ತೆ ಮುನ್ನೆಲೆಗೆ ಬಂದಿದ್ದು, ಪ್ರಕರಣದ ತನಿಖೆಯನ್ನು ಎಸ್‌ಐಟಿ ಮುಂದುವರಿಸಿದೆ. ಈ ಬೆನ್ನಲ್ಲೇ ಅನನ್ಯಾ ಭಟ್ ಕೇಸಿನಲ್ಲಿ ತಾನು ತಪ್ಪು ಮಾಡಿದ್ದು ಈ ಬಗ್ಗೆ ಕ್ಷಮೆ ಕೇಳುತ್ತೇನೆ. ನನ್ನ 60 ವರ್ಷದ ಜೀವನದಲ್ಲಿ ಇದೊಂದು ನನಗೆ ಕಪ್ಪು ಚುಕ್ಕಿ, ಇನ್ನಾದರೂ ನನಗೆ ಉತ್ತಮ ಜೀವನ ನಡೆಸುವ ಆಸೆಯಿದೆ, ಧರ್ಮಸ್ಥಳಕ್ಕೆ ಹೋಗಿ ತಪ್ಪು ಕಾಣಿಕೆ ಹಾಕುತ್ತೇನೆ, ಧರ್ಮಸ್ಥಳಕ್ಕೆ ಹೋಗಿ ಕಲ್ಲು ಹೊಡೆಯುತ್ತೇನೆ ಎಂದು ಹೇಳಿದ್ದೇನೆ, ನನ್ನಿಂದ ತಪ್ಪಾಗಿದೆ, ವೀರೇಂದ್ರ ಹೆಗ್ಗಡೆಯವನ್ನು ಭೇಟಿ ಮಾಡಿ ಕ್ಷಮೆ ಕೇಳುತ್ತೇನೆ ಎಂದಿದ್ದಾರೆ.
Comments are closed.