BBK-12 : ಅಧಿಕೃತವಾಗಿ ಬಿಗ್ ಬಾಸ್ ಮನೆಗೆ ಬಿತ್ತು ಬೀಗ- ರಾತ್ರೋರಾತ್ರಿ ಎಲ್ಲಾ ಸ್ಪರ್ಧಿಗಳು ಮನೆಯಿಂದ ಹೊರಕ್ಕೆ

Share the Article

BBK-12: ಕಂದಾಯ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮ ಉಲ್ಲಂಘನೆ ಆರೋಪದ ಮೇಲೆ, ಬಿಡದಿಯಲ್ಲಿರುವ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೂಟಿಂಗ್ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಗೆ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಜಾಲಿವುಡ್ ಸ್ಟುಡಿಯೋದಲ್ಲಿ (Jollywood Studios) ಬಿಗ್ ಬಾಸ್ ಕಾರ್ಯಕ್ರಮ ನಡೆಯುತ್ತಿದ್ದು, ಸ್ಟುಡಿಯೋಗೆ ಬೀಗ ಹಾಕಲಾಗಿದೆ. ಈ ಹಿನ್ನಲೆಯಲ್ಲಿ ರಾತ್ರೋರಾತ್ರಿ ಬಿಗ್ ಬಾಸ್ ಸ್ಪರ್ಧಿಗಳನ್ನು ಮನೆಯಿಂದ ಹೊರಕ್ಕೆ ಹಾಕಲಾಗಿದೆ.

ಹೌದು, ಇದೇ ಸ್ಟುಡಿಯೋದಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋ ನಡೆಯುತ್ತಿದೆ. 17 ಮಂದಿ ಸ್ಪರ್ಧಿಗಳು ಬಿಗ್ ಬಾಸ್ ಮನೆಯಲ್ಲಿ ಇದ್ದಾರೆ. ನೂರಾರು ತಂತ್ರಜ್ಞರು ಈ ರಿಯಾಲಿಟಿ ಶೋಗಾಗಿ ಕೆಲಸ ಮಾಡುತ್ತಿದ್ದಾರೆ. ಜಾಲಿವುಡ್ ಸ್ಟುಡಿಯೋದಿಂದ ಸರಿಯಾದ ರೀತಿಯಲ್ಲಿ ತಾಜ್ಯ ಸಂಸ್ಕರಣೆ ಮತ್ತು ವಿಲೇವಾರಿ ಆಗಿಲ್ಲ ಎಂಬ ಆರೋಪ ಇದೆ. ಆದ್ದರಿಂದ ಬೀಗ ಜಡಿಯಲಾಗಿದೆ. ಅಂತೆಯೇ ಅಧಿಕೃತವಾಗಿ ಬಿಗ್‌ಬಾಸ್‌ ಮನೆಗೂ ಬೀಗ ಹಾಕಲಾಗಿದ್ದು, ಸ್ಪರ್ಧೆಯಲ್ಲಿದ್ದ ಎಲ್ಲರನ್ನೂ ರಾತ್ರಿ ಮನೆಯಿಂದ ಹೊರಹಾಕಲಾಗಿದೆ. ಸ್ವತಃ ತಹಶೀಲ್ದಾರ್‌ ತೇಜಸ್ವಿನಿಯವರು ಮುಂದೆ ನಿಂತು ಸ್ಪರ್ಧಿಗಳು ಹೊರಗೆ ಕರೆತಂದಿದ್ದಾರೆ.

ಇದನ್ನೂ ಓದಿ:Koppala: ನಡುರಾತ್ರಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಭೀಕರ ಹ*ತ್ಯೆ !!

ಐದು ಕೋಟಿಗೂ ಅಧಿಕ ವೆಚ್ಚದಲ್ಲಿ ಬಿಗ್‌ ಬಾಸ್‌ ಮನೆ ನಿರ್ಮಾಣವಾಗಿತ್ತು. ಕಿಚ್ಚ ಸುದೀಪ್‌ ಆಶಯದಂತೆ ಇದೇ ಮೊದಲ ಬಾರಿಗೆ ಅದ್ಧೂರಿಯಾಗಿ ಮನೆ ನಿರ್ಮಾಣಗೊಂಡಿತ್ತು. ಬಿಗ್‌ಬಾಸ್‌ ದಿಢೀರ್‌ ಸ್ಥಗಿತದಿಂದ ಸ್ಪರ್ಧಿಗಳು, ತಂತ್ರಜ್ಞರು ಸೇರಿದಂತೆ 700 ಕ್ಕೂ ಹೆಚ್ಚು ಜನರು ಮನೆಗೆ ವಾಪಸ್‌ ಆಗುವಂತಾಗಿದೆ. ಆರು ತಿಂಗಳ ಕಾಲ ಮೂರು ಶಿಫ್ಟ್‌ನಲ್ಲಿ ತಂತ್ರಜ್ಞರು ಕೆಲಸ ಮಾಡುತ್ತಿದ್ದರು.

Comments are closed.