ರಾಜ್ಯದ ಜಾತಿ ಗಣತಿ ಸಮೀಕ್ಷಾದಾರರಿಗೆ ತಲಾ 20,000 ರೂ. ಗೌರವಧನ- ಸಿಎಂ ಸಿದ್ದರಾಮಯ್ಯ ಘೋಷಣೆ

Share the Article

ಬೆಂಗಳೂರು: ನಗರದ ವ್ಯಾಪ್ತಿಯಲ್ಲಿ ಸಮೀಕ್ಷೆ ಶುರುವಾಗಿದ್ದು, ಬರುವ ನರಕ ಚತುರ್ದಶಿಯೊಳಗೆ ಸಮೀಕ್ಷೆ ಮುಗಿಸಲು ಸೂಚಿಸಲಾಗಿದೆ. ಶಿಕ್ಷಕರು ಕೂಡ ಇಷ್ಟರೊಳಗೆ ಸಮೀಕ್ಷೆ ಮುಗಿಸುವ ಭರವಸೆ ನೀಡಿದ್ದಾರೆ ಸಮೀಕ್ಷಾದಾರರಿಗೆ ತಲಾ 20,000 ರೂಪಾಯಿ ಗೌರವಧನ ಕೊಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅಲ್ಲದೆ ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳಲು ಒಪ್ಪದ, ಹಿಂದೇಟು ಹಾಕುವವರ ವಿರುದ್ಧ ಸರ್ಕಾರ ಶಿಸ್ತು ಕ್ರಮ ಕೈಗೊಳ್ಳಲಿದೆ ಎಂದರು.

ಈ ತನಕ ಸಮೀಕ್ಷೆಯ ವೇಳೆ ಮೂವರು ಶಿಕ್ಷಕರು ಮೃತಪಟ್ಟಿದ್ದಾರೆ. ಈ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯ ಸಂದರ್ಭದಲ್ಲಿ ಮೂವರು ಶಿಕ್ಷಕರು ಸಾವನ್ನಪ್ಪಿದ್ದಾರೆ. ಅವರಿಗೆ ರಾಜ್ಯ ಸರ್ಕಾರದಿಂದ ತಲಾ 20 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಇದನ್ನೂ ಓದಿ:BBK-12 : ಅಧಿಕೃತವಾಗಿ ಬಿಗ್ ಬಾಸ್ ಮನೆಗೆ ಬಿತ್ತು ಬೀಗ – ರಾತ್ರೋರಾತ್ರಿ ಎಲ್ಲಾ ಸ್ಪರ್ಧಿಗಳು ಮನೆಯಿಂದ ಹೊರಕ್ಕೆ

ಯಾರು ಈ ಸರ್ವೆ ಕಾರ್ಯದಲ್ಲಿ ತೊಡಗಿಸಿಕೊಳ್ಳೋದಿಲ್ಲ, ಸಮೀಕ್ಷೆ ಮಾಡಲು ಒಪ್ಪೋದಿಲ್ಲವೋ ಅವರ ವಿರುದ್ಧ ರಾಜ್ಯ ಸರ್ಕಾರ ಶಿಸ್ತಿನ ಕ್ರಮ ಕೈಗೊಳ್ಳಲಿದೆ. ಅ. 19ಕ್ಕೆ ಮೊದಲು ರಾಜ್ಯದಲ್ಲಿ ಸಂಪೂರ್ಣವಾಗಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು ಮುಕ್ತಾಯಗೊಳಿಸಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.

Comments are closed.