Weather Report: ಕರ್ನಾಟಕದ ಹವಾಮಾನ ಮುನ್ಸೂಚನೆ : ಮುಂಗಾರು ಹಿಂದೆ ಸರಿಯುವ ಸಾಧ್ಯತೆ

Share the Article

Weather Report: ಕಾಸರಗೋಡು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಒತ್ತಡ ಹೆಚ್ಚಿದ್ದರೆ ಉಳಿದ ಭಾಗಗಳಲ್ಲಿಯೂ ಮಳೆಯ ಸಾಧ್ಯತೆಗಳಿವೆ.

ಈಗಿನಂತೆ ಕರಾವಳಿಯಲ್ಲಿ ಈ ಗುಡುಗು ಸಹಿತ ಮಳೆಯು ಒಕ್ಟೊಬರ್ 11ರ ತನಕ ಉತ್ತರ ಕನ್ನಡ ಹಾಗೂ ಒಕ್ಟೊಬರ್ 12ರ ತನಕ ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಮುಂದುವರಿಯುವ ಸಾಧ್ಯತೆಗಳಿವೆ. ನಂತರ ಬಿಸಿಲಿನ ವಾತಾವರಣದ ಸಾಧ್ಯತೆಗಳಿದ್ದರೂ, ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಒಕ್ಟೊಬರ್ 17ರಿಂದ ಮತ್ತೆ ಗುಡುಗು ಮಳೆ ಆರಂಭವಾಗುವ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು, ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮಲೆನಾಡು ಭಾಗಗಳಲ್ಲಿ ಒಕ್ಟೊಬರ್ 12ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಹಾವೇರಿ, ದಾವಣಗೆರೆ, ವಿಜಯನಗರ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಆವರಿಸುವ ಮುನ್ಸೂಚನೆ ಇದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.

ಇದನ್ನೂ ಓದಿ:Hasanambe: ಹಾಸನಾಂಬ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ – ಕಟ್ಟುನಿಟ್ಟಿನ ಜಾರಿಗೆ ಡಿಸಿ ಆದೇಶ

ಈಗಿನಂತೆ ಉತ್ತರ ಒಳನಾಡಿನಲ್ಲಿ ಉತ್ತರ ಒಳನಾಡಿನಲ್ಲಿ ಒಕ್ಟೊಬರ್ 10ರಿಂದ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಒಕ್ಟೊಬರ್ 12ರಿಂದ ಒಣ ಹವೆ ಆವರಿಸುವ ಸಾಧ್ಯತೆಗಳಿವೆ. ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಒಮಾನ್ ಕರಾವಳಿಯಲ್ಲೇ ನೈರುತ್ಯಕ್ಕೆ ಚಲಿಸಿ ಮುಂದಿನ 2 ಅಥವಾ 3 ದಿವಸಗಳಲ್ಲಿ ಶಿಥಿಲಗೊಳ್ಳುವ ಸಾಧ್ಯತೆಗಳಿವೆ. ಇದರೊಂದಿಗೆ ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆಗೆ ವೇಗ ಸಿಗಬಹುದು.

Comments are closed.