Siddaramaiah: ರಾಜ್ಯದಲ್ಲಿ ಅಮೋಘ ಸೇವೆ ಸಲ್ಲಿಸಿದ `ಅರಣ್ಯ ಸಿಬ್ಬಂದಿಗಳಿಗೆ’ ಪದಕ ನೀಡಿ, ಗೌರವಿಸಿದ CM ಸಿದ್ದರಾಮಯ್ಯ

Siddaramaiah: ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಆಯೋಜಿಸಿದ್ದ ಮುಖ್ಯಮಂತ್ರಿಗಳ ಪದಕ ಪ್ರಧಾನ ಸಮಾರಂಭ ಮತ್ತು 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು, ಅಮೋಘ ಸೇವೆ ಸಲ್ಲಿಸಿದ ಅರಣ್ಯ ಸಿಬ್ಬಂದಿಗಳಿಗೆ ಪದಕ ನೀಡಿ ಸಿಎಂ ಸಿದ್ದರಾಮಯ್ಯ (Siddaramaiah) ಗೌರವಿಸಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪರಿಸರ, ಅರಣ್ಯ ಸಂರಕ್ಷಕರಿಗೆ ಮುಖ್ಯಮಂತ್ರಿಗಳ ಪದಕ ವಿತರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಾಕಿದ ಹಸುವನ್ನು ಹುಲಿ ತಿಂದಿದೆ ಎನ್ನುವ ಕಾರಣಕ್ಕೆ ಹುಲಿಗಳಿಗೆ ವಿಷ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ. ಯಾರೇ ಅರಣ್ಯ ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲಲು ಮುಂದಾದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅವರು ಎಷ್ಟೇ ದೊಡ್ಡವರಾಗಿದ್ದರೂ ಮುಲಾಜು ನೋಡದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
Comments are closed.