Menstrual Leave: ಉದ್ಯೋಗಸ್ಥ ಮಹಿಳೆಯರಿಗೆ ಸಿಹಿ ಸುದ್ದಿ; ಇನ್ನು ಮುಂದೆ ವೇತನ ಸಹಿತ ಮುಟ್ಟಿನ ರಜೆ, ಸರಕಾರದಿಂದ ಅನುಮೋದನೆ

Siddaramaiah: ಉದ್ಯೋಗಸ್ಥ ಮಹಿಳೆಯರಿಗೆ ಸಿಎಂ ಸಿದ್ದರಾಮಯ್ಯ ಅವರು ಖುಷಿ ಸುದ್ದಿ ನೀಡಿದ್ದಾರೆ. ಮಹಿಳೆಯರಿಗೆ ಪ್ರತಿ ತಿಂಗಳು ವೇತನ ಸಹಿತ ಋತು ಚಕ್ರ ರಜೆ ಅಥವಾ ಮುಟ್ಟಿನ ರಜೆ ನೀಡುವ ಪ್ರಸ್ತಾವನೆಗೆ ಸಚಿವ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ. ಈ ಕುರಿತು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಚಿವ ಹೆಚ್ ಕೆ ಪಾಟೀಲ್ ಅವರು ಮಾಹಿತಿ ನೀಡಿದರು.

ರಾಜ್ಯದ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್, ಬಹುರಾಷ್ಟ್ರೀಯ ಕಂಪನಿಗಳು (MNC), ಐಟಿ, ಖಾಸಗಿ ಕೈಗಾರಿಕಾ ವಲಯಗಳಲ್ಲಿ ಮುಟ್ಟಿನ ರಜೆ ಅನ್ವಯವಾಗಲಿದೆ ಎಂದು ಪಾಟೀಲ್ ತಿಳಿಸಿದರು.
Comments are closed.