Kambala: ಕರಾವಳಿ ಕಂಬಳಕ್ಕೆ ರಾಜ್ಯ ಸರಕಾರದಿಂದ ಅಧಿಕೃತ ಮಾನ್ಯತೆ

Share the Article

Kambala: ಕರಾವಳಿ ಭಾಗದ ಪ್ರಸಿದ್ಧ ಜಾನಪದ ಕ್ರೀಡೆ ಕಂಬಳಕ್ಕೆ ರಾಜ್ಯ ಕ್ರೀಡೆಯ ಸ್ಥಾನಮಾನ ದೊರಕಿದೆ. ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್‌ಗೆ ಕರ್ನಾಟಕ ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ಮಾನ್ಯತೆ ನೀಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಂಡು ಕಂಬಳಕ್ಕೆ ರಾಜ್ಯ ಸರಕಾರ ಅಧಿಕೃತ ಮಾನ್ಯತೆ ನೀಡಿದೆ.

ರಾಜ್ಯ ಕಂಬಳ ಅಸೋಸಿಯೇಷನ್‌ಗೆ ಸರಕಾರವು ಮೂರು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶ ಹೊರಬರುವವರೆಗೂ ಮಾನ್ಯತೆ ನೀಡಿದೆ. ಈ ಕುರಿತು ಹೊರಡಿಸಿದ ಅಧಿಕೃತ ಆದೇಶದಲ್ಲಿ ಅಸೋಸಿಯೇಷನ್‌ ತನ್ನ ಆಡಳಿತ ಹಾಗೂ ಚಟುವಟಿಕೆಗಳಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಲು ನಿರ್ದಿಷ್ಟ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಸೂಚಿಸಲಾಗಿರುವ ಕುರಿತು ವರದಿಯಾಗಿದೆ.

ಕ್ರೀಡಾ ಇಲಾಖೆ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಅ.15ರಂದು ಮೊದಲ ಸಭೆ ಬೆಂಗಳೂರಿನಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಕಂಬಳ ಅಸೋಸಿಯೇಷನ್‍ನ ಬೈಲಾದ ಕರಡು ಪ್ರತಿ ಅನುಮೋದನೆ ಸಿಗಲಿದೆ.

ಇದನ್ನೂ ಓದಿ:Bigg Boss: ಎಲ್ಲರ ಫೆವರೇಟ್ ಶೋ ‘ಬಿಗ್ ಬಾಸ್’ ಹುಟ್ಟಿಕೊಂಡಿದ್ದು ಹೇಗೆ?

ರಾಜ್ಯ ಕಂಬಳ ಅಸೋಸಿಯೇಷನ್‌ ಪ್ರಥಮ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್‌ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ಉಪಾಧ್ಯಕ್ಷರಾಗಿ ನವೀನ್‍ಚಂದ್ರ ಆಳ್ವ ತಿರುವೈಲುಗುತ್ತು ವಾಮಂಜೂರು, ಕಾರ್ಯದರ್ಶಿಯಾಗಿ ವಿಜಯ ಕುಮಾರ್ ಕಂಗಿನಮನೆ ಕಾರ್ಕಳ, ಕೋಶಾಧಿಕಾರಿಯಾಗಿ ಲೋಕೇಶ್ ಶೆಟ್ಟಿ ಮುಚ್ಚೂರು ನೇಮಕವಾಗಿದ್ದಾರೆ.

Comments are closed.