Girish Mattannanavr: ಶಾಸಕರ ಭವನಕ್ಕೆ ಬಾಂಬ್ ಇಟ್ಟ ಪ್ರಕರಣ – ಗಿರೀಶ್ ಮಟ್ಟಣ್ಣನವರಿಗೆ ಮತ್ತೆ ಎದುರಾದ ಸಂಕಷ್ಟ

Girish Mattannanavr : ಮಾಜಿ ಪೊಲೀಸ್ ಅಧಿಕಾರಿ, ಸದ್ಯ ಸೌಜನ್ಯ ಪರ ಹೋರಾಟಗಾರರಾಗಿ ಗುರುತಿಸಿಕೊಂಡಿರುವ ಗಿರೀಶ್ ಮಟ್ಟಣ್ಣನವರಿಗೆ ಇದೀಗ ಸಂಕಷ್ಟ ಒಂದು ಎದುರಾಗಿದ್ದು, ಶಾಸಕರ ಭವನಕ್ಕೆ ಬಾಂಬ್ ಇಟ್ಟ ಪ್ರಕರಣ ಇದೀಗ ಮತ್ತೆ ಮರು ಜೀವ ಪಡೆದುಕೊಳ್ಳುವ ಲಕ್ಷಣಗಳು ಕಂಡುಬಂದಿವೆ.

ಹೌದು, ಹೋರಾಟಗಾರ ಗಿರೀಶ್ ಮಟ್ಟಣ್ಣವರ್ (Girish Mattannavar) ಈ ಹಿಂದೆ ವಿಧಾನಸೌಧದ ಬಳಿ ಬಾಂಬ್ ಇಟ್ಟಿದ್ದ ಆರೋಪ ನ್ಯಾಯಾಲಯದಲ್ಲಿ ಖುಲಾಸೆಯಾಗಿತ್ತು. ಆದರೆ, ಇದೀಗ ಆ ಪ್ರಕರಣವನ್ನು ಮತ್ತೆ ತನಿಖೆಗೆ ಒಳಪಡಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಬೆಂಗಳೂರು (Bengaluru) ನಗರ ಪೊಲೀಸ್ ಆಯುಕ್ತರ ಕಚೇರಿಗೆ ಹಾಗೂ ಗೃಹ ಕಾರ್ಯದರ್ಶಿಗೆ ದೂರು ಸಲ್ಲಿಸಿದ್ದು, ಶಾಸಕರ ಭವನದ ಬಳಿ ಬಾಂಬ್ ಇಟ್ಟಿದ್ದ ಪ್ರಕರಣವನ್ನು ಮರು ತನಿಖೆ ನಡೆಸಬೇಕು ಹಾಗೂ ಎನ್ ಐಎ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ತಾವೇ ಬಾಂಬ್ ತಯಾರಿಸಿ ಇಟ್ಟಿರುವುದಾಗಿ ಒಪ್ಪಿಕೊಂಡಿರುವ ರೀತಿಯಲ್ಲಿ ಗಿರೀಶ್ ಮಟ್ಟಣ್ಣವರ್ ಹಲವಾರು ವಿಡಿಯೋಗಳಲ್ಲಿ ಹೇಳಿಕೆಗಳನ್ನು ನೀಡಿದ್ದಾರೆ. ತಾವೇ ಬಾಂಬ್ ತಯಾರಿಸಿ ಇಟ್ಟಿರುವುದಾಗಿ ಒಪ್ಪಿಕೊಂಡಿರುವ ರೀತಿಯ ಹೇಳಿಕೆ ನೀಡಿದ್ದಾರೆ. ಅವರು ಆ ರೀತಿಯ ಹೇಳಿಕೆ ನೀಡಿರುವುದು ಸ್ಪಷ್ಟವಾಗಿದೆ. ಹೀಗಾಗಿ, ಕೇಸ್ ಈಗಾಗಲೇ ಕೋರ್ಟ್ನಲ್ಲಿ ಖುಲಾಸೆಯಾಗಿದ್ದರೂ, ಹೊಸ ಸಾಕ್ಷ್ಯಾಧಾರಗಳ ಹಿನ್ನೆಲೆಯಲ್ಲಿ ಪುನಃ ತನಿಖೆ ನಡೆಸುವ ಅಗತ್ಯವಿದೆ ಎಂದು ಪ್ರಶಾಂತ್ ಸಂಬರಗಿ ದೂರಿನಲ್ಲಿ ಹೇಳಿದ್ದಾರೆ.
ಇದನ್ನೂ ಓದಿ:Caste Survey : ಜಾತಿ ಸಮೀಕ್ಷೆಗಾಗಿ ಇನ್ನೂ ನಿಮ್ಮ ಮನೆಗೆ ಶಿಕ್ಷಕರು ಬಂದಿಲ್ವಾ? ತಕ್ಷಣ ಹೀಗೆ ಮಾಡಿ
ಏನಿದು ಪ್ರಕರಣ?
2003 ರಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿದ್ದ ಮಟ್ಟಣ್ಣನವರ್ ಅವರು ಶಾಸಕರ ಭವನದಲ್ಲಿ ಬಾಂ*ಬ್ಗಳನ್ನು ಇರಿಸಿದ್ದ ಪ್ರಕರಣದ ಆರೋಪಿಯಾಗಿದ್ದರು. 13 ವರ್ಷಗಳ ಬಳಿಕ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಪ್ರಮುಖ ಆರೋಪಿ ಮಟ್ಟಣ್ಣನವರ್ ಸೇರಿದಂತೆ ಎಲ್ಲಾ ಮೂವರು ಆರೋಪಿಗಳನ್ನು ಖುಲಾಸೆಗೊಳಿಸಿತ್ತು. ಇದೀಗ ಪ್ರಶಾಂತ್ ಸಾಂಬರಿಗೆ ಅವರು ಈ ಪ್ರಕರಣದ ಮರುತನಿಕೆ ಆಗಬೇಕೆಂದು ಆಗ್ರಹಿಸಿದ್ದಾರೆ.
Comments are closed.