Smruthi Mandana : ವಿರಾಟ್ ಕೊಹ್ಲಿಯ ದಾಖಲೆ ಮುರಿದು ಹೊಸ ಇತಿಹಾಸ ಸೃಷ್ಟಿಸಿದ ಸ್ಮೃತಿ ಮಂದಾನ!!

Share the Article

Smruthi Mandana: ಮಹಿಳಾ ಕ್ರಿಕೆಟ್ ಲೋಕದಲ್ಲಿ ಭಾರತೀಯ ಆಟಗಾರ್ತಿಯಾದ ಸ್ಮೃತಿ ಮಂದಾನ ಅವರ ಹೆಸರು ನಕ್ಷತ್ರದ ರೀತಿ ಮಿನುಗುತ್ತಿದೆ. ಇದೀಗ ಈಕೆ ಕ್ರಿಕೆಟ್ನ ದುಬಾರಿಯಾಗಿರುವ ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಮುರಿದಿದ್ದಾರೆ.

ಹೌದು, ವಿಶಾಖಪಟ್ಟಣದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮಹಿಳಾ ಏಕದಿನ ವಿಶ್ವಕಪ್​ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಆರಂಭಿಕಳಾಗಿ ಕಣಕ್ಕಿಳಿದ ಸ್ಮೃತಿ ಮಂಧಾನ 80 ರನ್ ಬಾರಿಸಿ ಮಿಂಚಿದ್ದರು. ಈ 80 ರನ್​ಗಳೊಂದಿಗೆ ಸ್ಮೃತಿ ಮಂಧಾನ ಏಕದಿನ ಕ್ರಿಕೆಟ್​ನಲ್ಲಿ 5000 ರನ್ ಪೂರೈಸಿದ್ದಾರೆ. ಈ ದಾಖಲೆಯ ಮೂಲಕ ಸ್ಮೃತಿ, ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಮುರಿದಿದ್ದಾರೆ.

ಅಂದಹಾಗೆ ವಿರಾಟ್ ಕೊಹ್ಲಿ 114 ಏಕದಿನ ಇನಿಂಗ್ಸ್​ಗಳ ಮೂಲಕ 5000 ರನ್ ಪೂರೈಸಿದ್ದರು. ಈ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 5 ಸಾವಿರ ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎಂಬ ಭರ್ಜರಿ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನು ಸ್ಮೃತಿ ಮಂಧಾನ ಮುರಿದಿದ್ದಾರೆ. ಈ ಮೂಲಕ ಇದರೊಂದಿಗೆ ಏಕದಿನ ಕ್ರಿಕೆಟ್​ ಇತಿಹಾಸದಲ್ಲೇ ಅತೀ ವೇಗವಾಗಿ 5000 ರನ್​ ಗಳಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ಸ್ಮೃತಿ ಮಂಧಾನ ಪಾಲಾಗಿದೆ.

Comments are closed.