Siddaramaiah: ಪ್ರಿಯಾಂಕ್ ಖರ್ಗೆ RSS ಬ್ಯಾನ್ ಪತ್ರ ಬೆನ್ನಲ್ಲೇ ಸಿಎಂ ಮಹತ್ವದ ಸೂಚನೆ

Siddaramaiah: ಸರಕಾರಿ ಸ್ಥಳ, ಮುಜುರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್‌ನ ಎಲ್ಲಾ ಚಟುವಟಿಕೆಗಳನ್ನು ರದ್ದು ಮಾಡುವಂತೆ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ. ಈ ಪತ್ರದ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಮುಖ್ಯ ಕಾರ್ಯದರ್ಶಿ ಶಾಲಿ ರಜನೀಶ್ ಅವರಿಗೆ ಕಳುಹಿಸಿ ಕೂಡಲೇ ಅಗತ್ಯ ಕ್ರಮ ವಹಿಸಿ ಎಂದು ಸೂಚನೆ ನೀಡಿದ್ದಾರೆ.

ಈ ಕುರಿತು ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದಲ್ಲಿ ಮಾಧ್ಯಮಗಳಿಗೆ ಬಹಿರಂಗವಾಗಿ ಈ ಕುರಿತು ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. RSS ಚಟುವಟಿಕೆ ನಿಷೇಧ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ. ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಸ್ ಗೆ ಸೂಚಿಸಿದ್ದೇನೆ. ತಮಿಳುನಾಡಿನಲ್ಲಿ ಯಾವ ರೀತಿ ಕ್ರಮ ಕೈಗೊಂಡಿದ್ದಾರೋ ಅದೇ ರೀತಿ ಕ್ರಮ ಕೈಗೊಳ್ಳಿ ಅಂತಾ ಸಿಎಸ್ ಗೆ ಸೂಚಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ:Karnataka Gvt: ಶಾಲೆಗಳಲ್ಲಿ ಇನ್ಮುಂದೆ ಅಡುಗೆಗೆ ಅಲ್ಯೂಮಿನಿಯಂ ಪಾತ್ರೆ ಬಳಸುವಂತಿಲ್ಲ
ಹಾಗಾದರೆ ಇನ್ನು ಮುಂದಿನ ದಿನಗಳಲ್ಲಿ ಸರಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಕಾರ್ಯಚಟುವಟಿಕೆಗಳಿಗೆ ತಡೆ ಬೀಳುವುದು ಗ್ಯಾರಂಟಿ ಎನ್ನಲಾಗಿದೆ.
Comments are closed.