Belthangady: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ತಡೆ ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್

Belthangady: ಮಹೇಶ್ ಶೆಟ್ಟಿ ತಿಮರೋಡಿಯ ಅಕ್ರಮ ಬಂದೂಕು ಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿರೀಕ್ಷಣಾ ಜಾಮೀನು ಕೋರಿದ್ದ ಅರ್ಜಿ ಮಂಗಳೂರು ಜಿಲ್ಲಾ ಕೋರ್ಟ್ನಲ್ಲಿ ಅ.9 ರಂದು ವಜಾ ಆಗಿತ್ತು. ನಂತರ ಗಡಿಪಾರು ಆದೇಶ ತಡೆ ಕೋರಿದ್ದ ಪ್ರಕರಣ ಕೂಡಾ ಹೈಕೋರ್ಟ್ ನಲ್ಲಿ ಅ.13 ರಂದು ವಿಚಾರಣೆಗೆ ಬದಿದ್ದು, ಈ ವಿಚಾರಣೆಯ ಆದೇಶವನ್ನು ಹೈಕೋರ್ಟ್ ಕಾಯ್ದಿರಿಸಿದೆ. ಮುಂದಿನ ಆದೇಶದವರೆಗೂ ಮಹೇಶ್ ಶೆಟ್ಟಿ ತಿಮರೋಡಿಗೆ ಬಲವಂತದ ಕ್ರಮ ಬೇಡ ಎಂದು ಹೈಕೋರ್ಟ್ ನ್ಯಾಯಪೀಠ ಹೇಳಿದೆ.

ಈ ಮೂಲಕ ಗಡಿಪಾರು ಜಾರಿಗೊಳಿಸದಂತೆ ಮಹತ್ವದ ಸೂಚನೆಯನ್ನು ನೀಡಿದೆ. ಹೀಗಾಗಿ ಮಹೇಶ್ ಶೆಟ್ಟಿ ತಿಮರೋಡಿ ತಾತ್ಕಾಲಿಕವಾಗಿ ಗಡಿಪಾರಿನಿಂದ ಪಾರಾಗಿದ್ದಾರೆ ಎನ್ನಬಹುದು. ಮಹೇಶ್ ತಿಮರೋಡಿ ವಿರುದ್ಧ ಸುಮಾರು 32 ವಿವಿಧ ಪ್ರಕರಣಗಳು ದಾಖಲಾಗಿದ್ದವು. ಹೀಗಾಗಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ಗಡಿಪಾರು ಮಾಡಲು ಆಗ್ರಹ ವ್ಯಕ್ತಗೊಂಡಿತ್ತು. ಇದರ ನಂತರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಒಂದು ವರ್ಷಗಳ ಕಾಲ ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಲಾಗಿತ್ತು.
ಸೆ.20 ರಂದೇ ಪುತ್ತೂರು ಸಹಾಯಕ ಆಯುಕ್ತರು ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು.
ಇದನ್ನೂ ಓದಿ:Gold Rate: ಧನತ್ರಯೋದಶಿಗೆ ಚಿನ್ನ 10 ಗ್ರಾಂಗೆ ₹1.3 ಲಕ್ಷದವರೆಗೆ ಏರಿಕೆಯಾಗಬಹುದು: ತಜ್ಞರು
Comments are closed.