Priyank Kharge : RSS ನಿಷೇಧಿಸಬೇಕೆಂದು ನಾನು ಹೇಳಿಲ್ಲ, ನಾನು ಹೇಳಿದ್ದೇ ಬೇರೆ – ಪ್ಲೇಟ್ ಚೇಂಜ್ ಮಾಡಿದ ಪ್ರಿಯಾಂಕ ಖರ್ಗೆ

Priyank Kharge : ರಾಜ್ಯದಲ್ಲಿ ಸದ್ಯ ಆರ್ ಎಸ್ ಎಸ್ ನಿಷೇಧದ ಕುರಿತು ಭಾರಿ ಚರ್ಚೆಯಾಗುತ್ತಿದೆ. ಕರ್ನಾಟಕ ಸರ್ಕಾರದ ಸಚಿವರಾದ ಪ್ರಿಯಾಂಕ ಖರ್ಗೆ ಅವರು ಈ ಕುರಿತಾಗಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು ಇದು ಎಲ್ಲೆಡೆ ವೈರಲ್ ಆಗಿ ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿದೆ. ಇದರ ಬೆನ್ನಲ್ಲೇ ಅನೇಕ ಕಾಂಗ್ರೆಸ್ ನಾಯಕರು ಆರ್ ಎಸ್ ಎಸ್ ರಾಜ್ಯದಲ್ಲಿ ಬ್ಯಾನ್ ಆಗಬೇಕು ಅಥವಾ ಯಾವುದೇ ಕಾರ್ಯಗಳನ್ನು ನಡೆಸಲು ಸರ್ಕಾರದ ಅನುಮತಿ ಪಡೆಯಬೇಕು ಇಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದರ ಬೆನ್ನಲ್ಲೇ ಇದೀಗ ಪ್ರಿಯಾಂಕ ಖರ್ಗೆ ಅವರು ಪ್ಲೇಟ್ ಚೇಂಜ್ ಮಾಡಿದ್ದು ಆರ್ಎಸ್ಎಸ್ ನಿಷೇಧಿಸಬೇಕೆಂದು ನಾನು ಎಲ್ಲಿಯೂ ಹೇಳಿಲ್ಲ ನಾನು ಹೇಳಿದ್ದೆ ಬೇರೆ ಎಂದು ವಾದ ಮಾಡಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಪತ್ರದ ಕುರಿತು ಸ್ಪಷ್ಟೀಕರಣ ನೀಡಿದ್ದು ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು (ಆರ್ಎಸ್ಎಸ್) ನಿಷೇಧಿಸಬೇಕು ಎಂದು ನಾನೆಲ್ಲಿ ಹೇಳಿದ್ದೇನೆ. ಸರ್ಕಾರಿ ಸ್ಥಳಗಳಲ್ಲಿ ಸಂಘ ಪರಿವಾರದವರ ಚಟುವಟಿಕೆಗಳನ್ನು ನಿಷೇಧಿಸಬೇಕು ಎಂಬುದಷ್ಟೇ ನನ್ನ ಆಗ್ರಹ ಎಂದು ಹೇಳಿದ್ದಾರೆ.
ಈ ಕುರಿತಾಗಿ ಮಾಧ್ಯಮಗಳೊಂದಿಗೆ ಮಾತನಾಡಿದವರು ನಾನು ಆರೆಸ್ಸೆಸ್ ನಿಷೇಧಿಸಬೇಕು ಎಂದು ಹೇಳಿಲ್ಲ. ನಿಯಮಾವಳಿ ಪ್ರಕಾರ ಅದು ನೋಂದಣಿಯಾಗದ ಸಂಸ್ಥೆ. ಪೊಲೀಸರ ಅನುಮತಿ ಪಡೆಯದೆ ಸರ್ಕಾರಿ ಹಾಗೂ ಅನುದಾನಿತ ಶಾಲೆ, ಕಾಲೇಜು ಮೈದಾನ, ಸಾರ್ವಜನಿಕ ಮೈದಾನ, ಉದ್ಯಾನ ಮತ್ತಿತರ ಸ್ಥಳಗಳಲ್ಲಿ ಶಾಖೆ, ಬೈಠಕ್ಗಳನ್ನು ನಡೆಸುತ್ತಾರೆ. ಅದನ್ನು ನಿಷೇಧಿಸಬೇಕು. ಬೇಕಿದ್ದರೆ ಅವರು ಖಾಸಗಿ ಸ್ಥಳಗಳಲ್ಲಿ ಚಟುವಟಿಕೆಗಳನ್ನು ನಡೆಸಿಕೊಳ್ಳಲಿ ಎಂದು ಹೇಳಿದ್ದೇನೆ ಎಂದು ತಿಳಿಸಿದರು.
Comments are closed.